ಹುಬ್ಬಳ್ಳಿ: ಸಿಎಂ ಕುಮಾರಸ್ವಾಮಿ ಬಿಜೆಪಿ ಕುರಿತು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಅವರು ಹಿಟ್ ಆ್ಯಂಡ್ ರನ್‌ನಲ್ಲಿ ನಿಸ್ಸೀಮರಾಗಿದ್ದಾರೆ. ಕಿಂಗ್‌ಪಿನ್ ಹಾಗೂ ಮಾಸ್ಟರ್‌ಪಿನ್ ಅವರಿಗೆ ಸಂಬಂಧಿಸಿದ್ದಾಗಿದ್ದು, ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಸರ್ಕಾರದೊಳಗಿನ ಆಂತರಿಕ ಸಮಸ್ಯೆ, ಒಳ ಬೇಗುದಿಯೇ ಕಾರಣ ವಿನಃ ಬಿಜೆಪಿ ಅದಕ್ಕೆ ಹೊಣೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ಹೇಳಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಭವಿಷ್ಯವೆಂಬುದಿಲ್ಲ. ಒಂದು ವೇಳೆ ಸಮ್ಮಿಶ್ರ ಸರ್ಕಾರ ಪತನಗೊಂಡರೆ ಬಿಜೆಪಿಗೆ ಅಧಿಕಾರ ಹಿಡಿಯಲು ಸಾಕಷ್ಟು ಅವಕಾಶಗಳಿವೆ. ಆದರೆ ಸಿಎಂ ಕುಮಾರಸ್ವಾಮಿ, ಬಿಜೆಪಿ ಸಮ್ಮಿಶ್ರ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ಸುಳ್ಳು ಆಪಾದನೆ ಮಾಡುತ್ತಿದ್ದಾರೆ. ನಾವು ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದರು.
ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ ಉಂಟಾಗಲು ಜೆಡಿಎಸ್ ಮತ್ತು ಕಾಂಗ್ರೆಸ್ ಕಾರಣ. ಕಾಂಗ್ರೆಸ್‌ನ ಒಳಗಡೆ ಸಾಕಷ್ಟು ಸಮಸ್ಯೆಗಳಿವೆ. ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್ ಚುನಾವಣೆ ವಿಷಯವಾಗಿ ಲಕ್ಷಿ¾à ಹೆಬ್ಟಾಳಕರ ಹಾಗೂ ಜಾರಕಿಹೊಳಿ ಸಹೋದರರ ನಡುವೆ ದೊಡ್ಡ ಕಿತ್ತಾಟ ನಡೆಯಿತು. ಆ ಪಕ್ಷದಲ್ಲಿ ದೊಡ್ಡ ಸಮಸ್ಯೆಯಿದೆ ಎಂಬುದು ಬಹಿರಂಗಗೊಂಡಿದೆ. ಬೆಳಗಾವಿ, ಚಿಕ್ಕೋಡಿ ಭಾಗದ ಶಾಸಕರಿಗೆ ಸಚಿವ ಡಿ.ಕೆ. ಶಿವಕುಮಾರ ಕೆಲಸ ಮಾಡಲು ಬಿಡುತ್ತಿಲ್ಲ, ಅನವಶ್ಯಕವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಅಸಮಾಧಾನಗೊಂಡಿದ್ದಾರೆ ಎಂದರು.
ಸಚಿವ ಎಚ್.ಡಿ. ರೇವಣ್ಣ ಲೋಕೋಪಯೋಗಿ ಇಲಾಖೆ ಜೊತೆಗೆ ಎಲ್ಲ ಇಲಾಖೆಗಳಲ್ಲಿ ತಮ್ಮ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಗುತ್ತಿಗೆ ಪಡೆದಿದ್ದಾರೆ. ಇವರ ಕಾರ್ಯವೈಖರಿಯಿಂದಾಗಿ ಬಹಳಷ್ಟು ಅಧಿಕಾರಿಗಳು, ಶಾಸಕರು ಅಸಮಾಧಾನಗೊಂಡಿದ್ದಾರೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಹೀಗಾಗಿ ಶಾಸಕರಲ್ಲಿ ಅಸಮಾಧಾನವುಂಟಾಗಿದೆ ಎಂದರು.