Advertisement

BJP ಯವರು ಈಗ ನಿರುದ್ಯೋಗಿಗಳು : ಸಚಿವ ಈಶ್ವರ ಖಂಡ್ರೆ

08:40 PM Jun 16, 2023 | Team Udayavani |

ದಾವಣಗೆರೆ: ಜಾತಿ, ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ, ಸಮಾಜ ಒಡೆಯುವ ,ಭಾವನಾತ್ಮಕ ವಿಷಯಗಳನ್ನು ಕೆರಳಿಸುವ ಕೆಲಸ ಮಾಡಿದ್ದರು.ಅದನ್ನು ತಡೆಗಟ್ಟುವ ಉದ್ದೇಶದಿಂದ ಮತಾಂತರ ನಿಷೇಧ ಕಾಯ್ದೆ ರದ್ಧತಿ ಕೆಲಸ ಮಾಡಿ ದ್ದೇವೆ ಎನ್ನುವ ಮೂಲಕ ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಸಭಾ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಯವರು ಈಗ ನಿರುದ್ಯೋಗಿಗಳಾಗಿದ್ದಾರೆ. ಬೇರೆ ಕೆಲಸವಿಲ್ಲ. ಹಾಗಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ದೂರಿದರು.

ಬಿಜೆಪಿಯವರೇ ವಿದ್ಯುತ್ ದರ ಏರಿಕೆ ಮಾಡಿದ್ದಾರೆ. 200 ಯೂನಿಟ್ ಒಳಗೆ ಉಪಯೋಗ ಮಾಡುವವರೆಗೆ ಉಚಿತ ವಿದ್ಯುತ್ ನೀಡಲಾಗುತ್ತದೆ. ಗ್ಯಾರಟಿ ಯೋಜನೆಗಳನ್ನು ಕಂಡಿಷನ್ ಹಾಕಿದ್ದು ರಾಜ್ಯದವರು ಇರಬೇಕು. ಯಾವುದೇ ಕಾರ್ಯಕ್ರಮ ತರಬೇಕು ಎಂದರೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಅದರಂತೆ ಗೃಹಭಾಗ್ಯ ಯೋಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶೇ. 90 ಜನರಿಗೆ ಲಾಭವಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಗರ್ ಹುಕುಂ ಸಾಗುವಳಿದಾರರ ಕೇಸ್ ಬಾಕಿ ಇರುವ ಬಗ್ಗೆ ಕಂದಾಯ ಸಚಿವ ಕೃಷ್ಣ ಭೆರೇಗೌಡ ಅವರು ಸುತ್ತೋಲೆ ಕಳಿಸಿದ್ದಾರೆ. ಅದನ್ನು ಪರಿಶೀಲನೆ ಮಾಡಿ, ಯಾರು ಬಡವರು ಇದ್ದಾರೆ ಎಂಬುದನ್ನು ಪರಿಶೀಲಿಸಿ ಕಾಲಮಿತಿಯಲ್ಲಿ ಎಲ್ಲ ಕೇಸ್ ಗಳನ್ನು ಕ್ಲಿಯರ್ ಮಾಡುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಶಾಸಕರು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವ ಶಂಕರಪ್ಪ ಅವರಿಗೆ 93ನೇ ಜನ್ಮ ದಿನದ ಶುಭಾಶಯ ಕೋರಿರುವೆ. ಅವರ ಜೀವನದ ಆದರ್ಶಗಳನ್ನು ನಾವೆಲ್ಲರು ಮೈಗೂಡಿಸಿಕೊಳ್ಳಬೇಕು. ಅವರು ಶತಾಯುಷಿಗಳಾಗಿ ಬಾಳಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next