ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯನ್ನು ಎದುರಿಸಲು ಬಿಜೆಪಿ ಪಕ್ಷವು ಸಿದ್ದವಾಗಿದೆ ಎಂದು ಬಿಜೆಪಿ ಮುಖಂಡ ಅರವಿಂದ ಲಿಂಬಾವಳಿ ಹೇಳಿದರು.
ಮಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ಪಂಚಾಯತ್ ಮಟ್ಟದ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗಿದೆ. ಪಂಚಾಯತ್ ಚುನಾವಣೆಯನ್ನು ಎದುರಿಸಲು ಬಿಜೆಪಿ ಸಿದ್ದವಾಗಿದೆ. ಪಂಚಾಯತ್ ಚುನಾವಣೆಯಲ್ಲಿ ಹೆಚ್ಚು ಮತ ಗಳಿಸುವ ಬಗ್ಗೆ ತಂತ್ರ ರೂಪಿಸಲಾಗಿದೆ ಎಂದು ಹೇಳಿದರು.
ಬಿಜೆಪಿ ಸಭೆಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ಸಿಗಲಿದೆ ಎಂಬ ವಿಶ್ವಾಸ ಬಂದಿದೆ. ಶಿಕ್ಷಕರ, ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ವ್ಯಕ್ತಿಗಳು ಜಯ ಸಾಧಿಸಲಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಬಲವಾದ ಶಕ್ತಿ ಹೊಂದಿರುವ ಪಕ್ಷವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿ ಲವ್ ಜಿಹಾದ್ ಕೊನೆಗಾಣಿಸಲು ಕಠಿಣ ಕ್ರಮ: ಮಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ
ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರಲು ಕೋರ್ ಕಮಿಟಿ ಸಭೆಯಲ್ಲಿ ಪ್ರಸ್ತಾಪ ಮಾಡಲಾಯಿತು. ಗೋಹತ್ಯೆ ನಿಷೇಧ ಕಾನೂನಿನ ಬಗ್ಗೆಯೂ ಪುನರ್ ವಿಮರ್ಶೆ ಮಾಡಲಾಯಿತು. ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿ ವಿಚಾರವಾಗಿ ಹತ್ತಾರು ಹೆಸರುಗಳಲ್ಲಿ ಪ್ರಮುಖರಾದವರನ್ನು ಆಯ್ಕೆ ಮಾಡುತ್ತೇವೆ ಎಂದು ಅರವಿಂದ ಲಿಂಬಾವಳಿ ಹೇಳಿದರು.