Advertisement

BJP ಅತ್ಯಂತ ಅಶಿಸ್ತಿನ ಪಕ್ಷ ಎಂದು ತೋರಿಸಿಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

03:38 PM Jul 03, 2023 | Team Udayavani |

ಬೆಂಗಳೂರು: ವಿಧಾನಸಭೆಯಲ್ಲಿ ವಿಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದ ಬಿಜೆಪಿಯು ಗುಂಪುಗಾರಿಕೆಯನ್ನು ತೋರಿಸುವ ಮೂಲಕ ಅತ್ಯಂತ ಅಶಿಸ್ತಿನ ರಾಜಕೀಯ ಪಕ್ಷ ಎನ್ನುವುದನ್ನು ತೋರಿಸಿಕೊಟ್ಟಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

Advertisement

ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿ ತನ್ನನ್ನು ಶಿಸ್ತಿನ ಪಕ್ಷ ಎಂದು ಕರೆದುಕೊಳ್ಳುತ್ತದೆ ಆದರೆ ಅದು ಅತ್ಯಂತ ಅಶಿಸ್ತಿನ ಪಕ್ಷ ಎಂದು ಕಿಡಿ ಕಾರಿದರು.

ಬಿಜೆಪಿ ಇನ್ನೂ ಕೆಳಮನೆಯಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಿಲ್ಲ.ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಚುನಾವಣಾ ಕೇಂದ್ರ ವೀಕ್ಷಕರನ್ನಾಗಿ ನೇಮಿಸಿದ್ದಾರೆ.

ಬಿಜೆಪಿಯ ಮುಖ್ಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಅನಿಲ್ ಬಲುನಿ, ಇಬ್ಬರು ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ವಿಧಾನಸಭೆಯಲ್ಲಿ ಪಕ್ಷದ ನಾಯಕರನ್ನು ಅದರ ಶಾಸಕರು ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next