Advertisement

15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಬಿಜೆಪಿ : ಸಚಿವ ಹಾಲಪ್ಪ ಆಚಾರ್

06:35 PM Oct 28, 2021 | Team Udayavani |

ಹನುಮಸಾಗರ: ”ವಿಶ್ವದಲ್ಲಿಯೇ 15 ಕೋಟಿ ಸದಸ್ಯರನ್ನು ಹೊಂದಿದ ಏಕೈಕ ಪಕ್ಷ ಎಂದರೇ ಬಿಜೆಪಿ ಪಕ್ಷ, ಆದ್ದರಿಂದ ಸರ್ಕಾರದ ಅಭಿವೃದ್ಧಿಯ ಬಗ್ಗೆ ಜನರ ಮನೆಮನೆಗಳಿಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ” ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಗುರುವಾರ ಹೇಳಿಕೆ ನೀಡಿದ್ದಾರೆ.

Advertisement

ಅಭಿನವ ತಿರುಪತಿ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಂಡ ಕೊಪ್ಪಳ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

”ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದರೂ ನಾವು ಸೋಲುವುದಕ್ಕೆ ಪ್ರಮುಖ ಕಾರಣ ನಮ್ಮ ಪಕ್ಷ ಸರ್ಕಾರದ ಅಭಿವೃದ್ಧಿ ಕೆಲಸ ಹಾಗೂ ಸಾಧನೆ ಗಳನ್ನು ಜನರಿಗೆ ತಲುಪಿಸುವಲ್ಲಿ ವಿಫಲವಾದ ಹಿನ್ನಲೆಯಲ್ಲಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರ ಸೋಲಬೇಕಾಯಿತು” ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಚಿಂತನೆ ವಿಚಾರಗಳ ಮೂಲಕ ವಿಶ್ವ ನಾಯಕರಾಗಿ ಎಲ್ಲಾ ದೇಶಗಳ ಗಮನಸೆಳೆದಿದ್ದಾರೆ. ಬಿಜೆಪಿ ನೇತ್ರತ್ವದ ವಿವಿಧ ರಾಜ್ಯಗಳಲ್ಲಿ ಅಭಿವೃದ್ಧಿ ಆಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿದ ತಕ್ಷಣ ರೈತರ ಮಕ್ಕಳು ಆರ್ಥಿಕ ಸಂಕಷ್ಟದಿAದ ಶಿಕ್ಷಣದಿಂದ ವಂಚಿತವಾಗಬಾರದು ಎನ್ನುವ ಉದ್ದೇಶದಿಂದ ೧ ಸಾವಿರ ಕೋಟಿ ವಿದ್ಯಾರ್ಥಿವೇತನ, ಹಾಗೂ ವೃದ್ದರಿಗೆ ವೃದ್ಧಾಪ್ಯದ ವೇತನವನ್ನು ಹೆಚ್ಚಿಸುವ ದಿಟ್ಟ ಕ್ರಮವನ್ನು ಕೈಗೊಂಡರು ಆದ್ದರಿಂದ ಬಿಜೆಪಿ ಸರ್ಕಾರದ ಸಾಧನೆ ಅಭಿವೃದ್ಧಿ ಕೆಲಸಗಳನ್ನು ಜನರ ಬಳಿ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲೆ ಇದೆ ಎಂದು ಹೇಳಿದರು.

ಸಂಸದ ಸಂಗಣ್ಣ ಕರಡಿ ಮಾತನಾಡಿ, ”ಜಿಲ್ಲೆಯಲ್ಲಿ ಅನೇಕ ಜನಪರ ಕಾರ್ಯಗಳು ಜರುಗಬೇಕಾಗಿದ್ದು, ರಾಜ್ಯ ಹಾಗೂ ಕೇಂದ್ರದಿಂದ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಲಾಗುವುದು. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ರಾಷ್ಟ್ರ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಮೋದಿ ಹೆಚ್ಚಿಸಿದ್ದಾರೆ. ಪಕ್ಷ ಸಂಘಟನೆಯ ಮುಖ್ಯ ಜವಾಬ್ದಾರಿ ಕಾರ್ಯಕರ್ತರ ಮೇಲಿದ್ದು ಸಂಘಟನೆ ಮಾಡಿ ಪಕ್ಷವನ್ನು ಬಲಪಡಿಸಬೇಕಾಗಿದೆ” ಎಂದರು.

Advertisement

ಶಾಸಕರಾದ. ಬಸವರಾಜ ದಡೇಸೂರ, ಪರಣ್ಣ ಮನವಳ್ಳಿ ಮಾತನಾಡಿ ”ಪಕ್ಷದ ಕಾರ್ಯಕರ್ತರೇ ಪಕ್ಷದಲ್ಲಿ ಜೀವಾಳ ಆದ್ದರಿಂದ ಸಾಮಾಜಿಕ ಜಾಲತಾಣಗಳ ಮೂಲಕ ಜಿಲ್ಲೆ ಹಾಗೂ ತಾಲೂಕಗಳಲ್ಲಿ ಬಿಡುಗಡೆಯಾದ ಅನುದಾನ ಮತ್ತು ಅಭಿವೃದ್ದಿ ಕಾರ್ಯಗಳನ್ನು ಪಟ್ಟಿ ಮಾಡಿ ಜನರಿಗೆ ತಲುಪಿಸುವ ಮೂಲಕ ಮತ್ತೊಮ್ಮೆ ಸರ್ಕಾರವನ್ನು ತರುವಲ್ಲಿ ಯಶಸ್ವಿಯಾಗಬೇಕು” ಎಂದರು.

”ಬೊಮ್ಮಾಯಿ ಸರ್ಕಾರವು ದೀಪಾವಳಿಯ ಬಳಿಕ ಗಂಗಾವತಿಯಲ್ಲಿ ಭತ್ತ ಖರೀದಿ ಕೇಂದ್ರವನ್ನು ಸ್ಥಾಪಿಸಲು ಕ್ರಮ ಕೈಗೊಂಡಿದೆ” ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡನಗೌಡ ಎಚ್. ಪಾಟೀಲ್ ಪಕ್ಷ ಸಂಘಟನೆಯ ಬಗ್ಗೆ, ಸರ್ಕಾರದ ಸಾಧನೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ, ಮಹಿಳಾ ಮೊರ್ಚ ಸಂಘಟನಾ ಕಾರ್ಯದರ್ಶಿ ಹೇಮಲತಾ ನಾಯಕ, ವಿಭಾಗೀಯ ಪ್ರಭಾರಿ ಸಿದ್ದೇಶ ಯಾದವ,ಸಹಪ್ರಭಾರಿ ಚಂದ್ರಶೇಖರ್ ಪಾಟೀಲ್ ಅಲಗೇರಿ, ತಾಲೂಕಾಧ್ಯಕ್ಷ ಬಸವರಾಜ ಹಳ್ಳೂರು, ಮಾಜಿ ಶಾಸಕ ಜಿ. ವೀರಪ್ಪ, ಜಿಲ್ಲಾ ಮಾಜಿ ಅಧ್ಯಕ್ಷ ವಿರೂಪಾಕ್ಷಪ್ಪ ಸಿಂಗನಾಳ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.

ಕೊಪ್ಪಳ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಲಪ್ಪ ಆಚಾರ್ ಉದ್ಘಾಟಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next