Advertisement
ಬಿಜೆಪಿ ಶಾಸಕ ರಾಜುಗೌಡ ಸೇರಿ ಕೆಲವರು ಆನಂದ್ ಸಿಂಗ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತೆರಳಿದರೂ ಭೇಟಿಗೆ ಅವಕಾಶ ಸಿಗಲಿಲ್ಲ. ಇದು ಇನ್ನಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತು. ಘಟನೆ ನಂತರ ಕಾಂಗ್ರೆಸ್ ನಾಯಕರು ನೀಡುತ್ತಿರುವ ವೈರುಧ್ಯದ ಹೇಳಿಕೆಗಳು, ಆಗಾಗ್ಗೆ ನೀಡುತ್ತಿರುವ ವ್ಯತಿರಿಕ್ತ ಸಮಜಾಯಿಷಿಗಳು, ಸಮಯ ಕಳೆದಂತೆಲ್ಲಾ ಹೊಸ ವಿಚಾರಗಳು ಬಹಿರಂಗವಾಗುತ್ತಿರುವುದನ್ನು ಬಿಜೆಪಿ ನಾಯಕರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಪೊಲೀಸರುಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿರುವ ಬಿಜೆಪಿ ನಾಯಕರು, ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಮನವಿ ಸಲ್ಲಿಸುವ ಬಗ್ಗೆಯೂ ಗಂಭೀರ ಚಿಂತನೆಯಲ್ಲಿದ್ದಾರೆ.
Related Articles
Advertisement
ಕೂಡಲೇ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಸರ್ಕಾರ ಹಾಗೂ ಪೊಲೀಸರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂಬುದನ್ನು ಸೋಮವಾರದವರೆಗೆ ಗಮನಿಸಲಾಗುವುದು. ಒಂದೊಮ್ಮೆ ಪೊಲೀಸರು ಕ್ರಮ ಕೈಗೊಳ್ಳದಿದ್ದರೆ ಘಟನೆಗೆ ಸಂಬಂಧಪಟ್ಟಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸುವ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಮುಂದುವರಿಯಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂì ಆದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು.
ಎಚ್ಚರಿಕೆಯ ಹೆಜ್ಜೆ: ಇನ್ನೊಂದೆಡೆ, ಕಾಂಗ್ರೆಸ್ ಶಾಸಕರ ಬಡಿದಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಎಚ್ಚರಿಕೆಯ ಹೆಜ್ಜೆಯನ್ನಿಡುತ್ತಿದೆ ಎನ್ನಲಾಗಿದೆ. ಹೊಡೆದಾಡಿಕೊಂಡಿರುವ ಮೂವರು ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದವರೇ ಆಗಿದ್ದರಿಂದ ಪ್ರಕರಣದ ಬಗ್ಗೆ ವೈಯಕ್ತಿಕವಾಗಿ ಹೆಚ್ಚು ಟೀಕೆ-ವಾಗಾಟಛಿಳಿ ನಡೆಸುವುದು ಬೇಡ. ಅದಕ್ಕಿಂತ ಪಕ್ಷ ಹಾಗೂ ಸರ್ಕಾರದ ಮೇಲೆ ದಾಳಿ ಮಾಡುವುದು ಸೂಕ್ತ ಎಂಬ ಅಭಿಪ್ರಾಯವೂ ಪಕ್ಷದಲ್ಲಿ ಇದೆ ಎಂದು ಹೇಳಲಾಗಿದೆ. ಒಟ್ಟಾರೆ ರೆಸಾರ್ಟ್‌ನಲ್ಲಿ ಕಾಂಗ್ರೆಸ್ ಶಾಸಕರ ಬಡಿದಾಟ ಪ್ರಕರಣದಿಂದ ಕಾಂಗ್ರೆಸ್, ಬಿಜೆಪಿ ನಾಯಕರ ನಡುವೆ ವಾಕ್ಸಮರಕ್ಕೆ ಹೊಸ ವಿಷಯ ಸಿಕ್ಕಂತಾಗಿದೆ.