Advertisement

ಬಿಜೆಪಿಯಿಂದ ಜಾತಿ, ಧರ್ಮ ಒಡೆಯುವ ಕೆಲಸ: ಸಿದ್ದರಾಮಯ್ಯ

08:29 PM Sep 17, 2022 | Team Udayavani |

ಮಂಡ್ಯ: ಧರ್ಮ ಕೇಂದ್ರಿತ ರಾಜಕಾರಣ ಮಾಡಬಾರದು ಎಂದು ಸಂವಿಧಾನವೇ ಹೇಳಿದೆ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಧರ್ಮ ರಾಜಕಾರಣ ಮಾಡುತ್ತಿದ್ದು, ಬಿಜೆಪಿಯವರು ಜಾತಿ, ಧರ್ಮಗಳನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

Advertisement

ನಗರದ ಸುಮರವಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಭಾರತ್‌ ಜೋಡೋ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ನ ನಾಯಕರಾದ ರಾಹುಲ್‌ ಗಾಂಧಿ ಬಿಜೆಪಿಯಿಂದ ಒಡೆದಿರುವ ಮನಸ್ಸುಗಳನ್ನು ಒಗ್ಗೂಡಿಸುವ ಉದ್ದೇಶದಿಂದ  ಪಾದಯಾತ್ರೆ ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ  ಯಾತ್ರೆಯಾಗಲಿದೆ. ಆದ್ದರಿಂದ ಎಲ್ಲರೂ ಇದಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿಯದ್ದು ಭ್ರಷ್ಟ ಸರ್ಕಾರ

ರಾಜ್ಯದಲ್ಲಿರುವುದು ಭ್ರಷ್ಟ ಬಿಜೆಪಿ ಸರಕಾರ. ಸದಾ ಕಮಿಷನ್‌ ಪಡೆಯುವ ಮೂಲಕ ಕಾಸಿನದ್ದೆ ಚಿಂತೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಬಿಜೆಪಿ ವಿರುದ್ಧ ಕಿಡಿಕಾರಿದರು.

Advertisement

ನಿಲ್ಲದ ಸಿದ್ದು-ಡಿಕೆಶಿ ಒಳಮುನಿಸು?

ಶನಿವಾರ ನಡೆದ ಭಾರತ ಐಕ್ಯತಾ ಪಾದಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವಿನ ಮುನಿಸು ಮತ್ತೊಮ್ಮೆ ಬಹಿರಂಗೊಂಡಿತು.  ಕಾರ್ಯಕ್ರಮ ಬೆಳಗ್ಗೆ 11.30ಕ್ಕೆ ನಿಗದಿಯಾಗಿತ್ತು. ಆದರೆ ಸಿದ್ದರಾಮಯ್ಯ ಮಧ್ಯಾಹ್ನ 1 ಗಂಟೆಗೆ ಆಗಮಿಸಿದರು. ಅದಾದ ಅರ್ಧ ಗಂಟೆ ಬಳಿಕ ಡಿ.ಕೆ.ಶಿವಕುಮಾರ್‌ ಆಗಮಿಸಿದರು. ಅಷ್ಟರೊಳಗೆ ಸಭೆ ಆರಂಭಿಸಲಾಗಿತ್ತು. ಡಿ.ಕೆ.ಶಿವಕುಮಾರ್‌ ಸಭಾಂಗಣಕ್ಕೆ ಬರುತ್ತಿದ್ದಂತೆ ಕಾರ್ಯಕರ್ತರು ಜೈಕಾರ ಕೂಗಿದರು. ಇದೊಂದು ಇಬ್ಬರ ನಾಯಕರ ಶಕ್ತಿ ಪ್ರದರ್ಶನದಂತೆ ಕಂಡು ಬಂದಿತು.

Advertisement

Udayavani is now on Telegram. Click here to join our channel and stay updated with the latest news.

Next