Advertisement

BJP ಸರ್ಕಾರ ಬಡವರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ: ಕಾಂಗ್ರೆಸ್ ವಿರುದ್ಧ ಮೋದಿ ಕಿಡಿ

04:42 PM Mar 29, 2022 | Team Udayavani |

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮಧ್ಯಪ್ರದೇಶದಲ್ಲಿ ನಿರ್ಮಿಸಲ್ಪಟ್ಟ 5.21 ಲಕ್ಷ ಫಲಾನುಭವಿಗಳ ಮನೆಯ ಗೃಹ ಪ್ರವೇಶಂ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಮಾರ್ಚ್ 29) ಉದ್ಘಾಟಿಸಿದರು. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಕಾರ್ಯಕ್ರಮವನ್ನು ಉದ್ಘಾಟಿಸಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಉಪಸ್ಥಿತರಿದ್ದರು.

Advertisement

ಇದನ್ನೂ ಓದಿ:ಅಸ್ಸಾಂ, ಮೇಘಾಲಯ ಮಹತ್ವದ ಒಪ್ಪಂದಕ್ಕೆ ಸಹಿ: ಕೊನೆಗೂ ಬಗೆಹರಿದ 50 ವರ್ಷದ ಗಡಿ ವಿವಾದ

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ ಕೆಲವು ರಾಜಕೀಯ ಪಕ್ಷಗಳು ಬಡತನ ನಿರ್ಮೂಲನೆ ಮಾಡುವುದಾಗಿ ತುಂಬಾ ಘೋಷಣೆಗಳನ್ನು ಕೂಗಿದ್ದವು. ಆದರೆ ಬಡವರ ಸಬಲೀಕರಣ ಸಾಧ್ಯವಾಗಲಿಲ್ಲ ಎಂದರು.

ಬಡವರು ಸಬಲೀಕರಣಗೊಂಡಾಗಲೇ ಬಡತನದ ವಿರುದ್ಧ ಹೋರಾಡುವ ಧೈರ್ಯ ಬರಲಿದೆ ಎಂದು ನಾನು ಭಾವಿಸುತ್ತೇನೆ. ಪ್ರಾಮಾಣಿಕ ಸರ್ಕಾರಗಳು ಒಟ್ಟಾಗಿ ಸೇರಿ ಬಡವರ ಸಬಲೀಕರಣ ಮಾಡಿದಾಗ, ಬಡತನ ನಿರ್ಮೂಲನೆಯಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿರಲಿ ಅಥವಾ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿರಲಿ ಪಕ್ಷವು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಮಂತ್ರದೊಂದಿಗೆ ಮುನ್ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಡವರ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

Advertisement

ಹಿಂದಿನ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ನನಗಿಂತ ಹಿಂದೆ ಇದ್ದ ಸರ್ಕಾರ ತಮ್ಮ ಅಧಿಕಾರಾವಧಿಯಲ್ಲಿ ಕೇವಲ ಕೆಲವು ಲಕ್ಷ ಮನೆಗಳನ್ನು ಬಡವರಿಗೆ ನಿರ್ಮಿಸಿಕೊಟ್ಟಿತ್ತು. ನಮ್ಮ ಸರ್ಕಾರ ಬಡವರಿಗೆ 2.5 ಕೋಟಿ ಮನೆಗಳನ್ನು ನಿರ್ಮಿಸಿಕೊಟ್ಟಿದೆ. ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಬಿಕ್ಕಟ್ಟು ಇದ್ದರೂ ಕೂಡಾ ಮನೆ ನಿರ್ಮಾಣ ಕಾರ್ಯ ನಿಧಾನಗೊಂಡಿಲ್ಲ ಎಂದು ಪ್ರಧಾನಿ ಮೋದಿ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next