Advertisement
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸೋಮಣ್ಣ ಅವರು ಬಿಜೆಪಿಯ ವಿಚಾರಗಳನ್ನು ಮಠದಲ್ಲಿ ಮಾತನಾಡುವ ಅವಶ್ಯಕತೆಯಾದರೂ ಏನಿತ್ತು ಎಂದು ಖಾರವಾಗಿ ಪ್ರಶ್ನಿಸಿದರು. ಜ.16 ರ ನಂತರ ದೆಹಲಿಗೆ ಹೋಗುವುದಾಗಿ ಸೋಮಣ್ಣ ಅವರು ಹೇಳುತ್ತಿದ್ದಾರೆ. ಹೋಗುವುದಾದರೆ ಹೋಗಲಿ. ಅಲ್ಲಿ ನಾಯಕರಿಗೆ ಅದೇನು ಚಾಡಿ ಹೇಳುತ್ತಾರೋ ಹೇಳಲಿ. ಅವರೊಬ್ಬರಿಗೆ ಅಲ್ಲ ನಮಗೂ ದೆಹಲಿ ನಾಯಕರು ಗೊತ್ತು. ನಾವೂ ಸಹ ದೆಹಲಿಗೆ ಹೋಗುತ್ತೇವೆ ಎಂದರು.
Related Articles
Advertisement
ಕಳೆದ ವಿಧಾನ ಸಭಾ ಚುನಾವಣೆಯಲ್ಲಿನ ಸೋಲು ಕಂಡೇ ದೆಹಲಿ ನಾಯಕರು ವಿಜಯೇಂದ್ರ ಅವರಿಗೆ ರಾಜ್ಯ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ವಿಜಯೇಂದ್ರ ಅಧ್ಯಕ್ಷರಾಗಿದ್ದಕ್ಕೆ ರಾಜ್ಯವ್ಯಾಪಿ ಪಕ್ಷಕ್ಕೆ ಹೆಚ್ಚು ಬಲ ಬಂದಂತಾಗಿದೆ ಎಂದು ತಿಳಿಸಿದರು.
ಸೋಮಣ್ಣ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿರುವುದನ್ನ ಅವಮಾನಿಸುತ್ತಿದ್ದಾರೆ. ಅವರು ನನಗೆ ಹಿರಿಯಣ್ಣನ ಸಮಾನ. ಈಗಲೂ ಬಾರಲೇ… ತಮ್ಮ ಅಂತಲೇ ಮಾತನಾಡುವ ಸೋಮಣ್ಣ ನನ್ನ ಕ್ಷೇತ್ರಕ್ಕೆ ಸಾಕಷ್ಟು ಮನೆ ನೀಡಿದ್ದಾರೆ. ಏನೇ ಸಮಸ್ಯೆ ಇದ್ದರೂ ಪಕ್ಷದಲ್ಲಿ ಕುಳಿತು ಚರ್ಚಿಸಲಿ. ಅದನ್ನು ಬಿಟ್ಟು, ಹಾದಿ ರಂಪ, ಬೀದಿ ರಂಪ ಮಾಡುವುದು ಸರಿಯಲ್ಲ. ಮನೆಯನ್ನು ಕೂಡಿಸುವ ಕೆಲಸ ಮಾಡಲಿ. ಮನೆ ಒಡೆಯುವ ಕೆಲಸ ಬೇಡ ಎಂದು ಸೋಮಣ್ಣಗೆ ಮನವಿ ಮಾಡುವುದಾಗಿ ತಿಳಿಸಿದರು.
ಜಾತಿಗಣತಿಗೆ ವಿರೋಧ : ಗಂಭೀರವಾಗಿ ಪರಿಗಣಿಸಬೇಕು
ಜಾತಿಗಣತಿ ಬಗ್ಗೆ ವೀರಶೈವ ಲಿಂಗಾಯತ, ಒಕ್ಕಲಿಗ ಸೇರಿದಂತೆ ವಿವಿಧ ಸಮಾಜ ಮತ್ತು ಅನೇಕ ಸಚಿವರು, ಶಾಸಕರು ಪಕ್ಷಾತೀತವಾಗಿ ವಿರೋಧಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.
ವೈಯಕ್ತಿಕವಾಗಿಯೂ ನನ್ನ ವಿರೋಧ ಇದೆ. ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿರುವ ಜಾತಿ ಗಣತಿ ಕೈಬಿಟ್ಟು, ಹೊಸದಾಗಿ ವೈಜ್ಞಾನಿಕವಾಗಿ, ವ್ಯವಸ್ಥಿತವಾಗಿ ಜಾತಿ ಗಣತಿ ಕಾರ್ಯ ನಡೆಸಲಿ. ಅವಸರದಲ್ಲಿ ವರದಿ ಅಂಗೀಕರಿಸುವ ದುಸ್ಸಾಹಸ ಮಾಡಬಾರದು ಎಂದು ಒತ್ತಾಯಿಸಿದರು.
ವೀರಶೈವ ಲಿಂಗಾಯತ, ಒಕ್ಕಲಿಗ ಸೇರಿದಂತೆ ಎಲ್ಲ ಜಾತಿ, ಜನಾಂಗಗಳಲ್ಲೂ ಆರ್ಥಿಕವಾಗಿ ಹಿಂದುಳಿದವರು, ಕಡು ಬಡವರು ಇದ್ದಾರೆ. ತರಾತುರಿಯಲ್ಲಿ ಜಾತಿಗಣತಿ ವರದಿ ಅಂಗೀಕರಿಸುವ ಕೆಲಸವನ್ನ ಸರ್ಕಾರ ಮಾಡ ಬಾರದು. ಗಾಜಿನ ಮನೆಯಲ್ಲಿ ಕುಳಿತು ವರದಿ ತಯಾರಿಸಿದ್ದಾರೆ. ಇನ್ನೂ ಐದಾರು ತಿಂಗಳಾಗಲಿ ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ, ವೈಜ್ಞಾನಿಕವಾಗಿ ಜಾತಿಗಣತಿ ಆಗಬೇಕು ಎಂದು ಮನವಿ ಮಾಡಿದರು.