Advertisement
ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬಲ ಹೆಚ್ಚಿಸಲು, ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದು ಈ ಬೃಹತ್ ಸಮಾವೇಶದ ಉದ್ದೇಶವಾಗಿದೆ. ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹಾಗೂ ರಾಜ್ಯದ ಬಿಜೆಪಿಯ ಎಲ್ಲ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ಜನೋತ್ಸವದ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಸುಮಾರು 4 ಲಕ್ಷ ಜನರನ್ನು ಕರೆತರಲು ಬಿಜೆಪಿ ನಿರ್ಧರಿಸಿದೆ. ಜನರನ್ನು ಕರೆ ತರಲು 4500 ಬಸ್‌ಗಳಲ್ಲದೇ, ಕಾರು, ಟಿಟಿ ಸೇರಿದಂತೆ ಇತರ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
Related Articles
ಕಳೆದ ತಿಂಗಳು ದಾವಣಗೆರೆಯಲ್ಲಿ ನಡೆದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜನ್ಮದಿನಾಚರಣೆಗೆ ಪ್ರತ್ಯುತ್ತರ ನೀಡಲು ಬಿಜೆಪಿ ಈ ಸಮಾವೇಶವನ್ನು ಬಳಸಿಕೊಳ್ಳಲು ತೀರ್ಮಾಸಿದೆ ಎಂದು ಹೇಳಲಾಗಿದೆ.
Advertisement
ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರಿಂದ ಆ ಕಾರ್ಯಕ್ರಮ ರಾಷ್ಟ್ರ ಮಟ್ಟದಲ್ಲಿ ಹೆಚ್ಚು ಸದ್ದು ಮಾಡಿತ್ತು. ಆ ಕಾರ್ಯಕ್ರಮಕ್ಕೆ ಜನೋತ್ಸವದ ಮೂಲಕ ಬಿಜೆಪಿ ನಾಯಕರು ಸಂದೇಶ ರವಾನೆ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವರ ಉಸ್ತುವಾರಿ:ಜನೋತ್ಸವ ಕಾರ್ಯಕ್ರಮ ಯಶಸ್ವಿಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ್, ತೋಟಗಾರಿಕಾ ಸಚಿವ ಮುನಿರತ್ನ ಹಾಗೂ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜ್ ಸಮಾವೇಶದ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿದ್ದು, ಮೂವರು ಸಚಿವರು ಸಮಾವೇಶದ ಯಶಸ್ಸಿಗಾಗಿ ನಿರಂತರ ಪ್ರಯತ್ನ ನಡೆಸಿದ್ದಾರೆ.