Advertisement
ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 11ಕ್ಕೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾ ರೋಪ ಸಮಾವೇಶ ಹಮ್ಮಿಕೊಳ್ಳ ಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಸ್ಥಳೀಯ ಶಾಸಕರು, ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಸಮಾವೇಶಕ್ಕೆ ಬಳಕೆಯಾದ ವೇದಿಕೆಯೇ ಬಿಜೆಪಿ- ಜೆಡಿಎಸ್ ಸಮಾವೇಶಕ್ಕೂ ಉಪಯೋಗ ವಾಗಲಿದೆ. ವಿಶಾಲವಾದ ಸಮಾ ರಂಭ ಸ್ಥಳಕ್ಕೆ ಜಲ ನಿರೋಧಕ ಟೆಂಟ್ ಹಾಕಲಾಗಿದ್ದು, ನೂಕುನುಗ್ಗಲು ಉಂಟಾಗದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ. ಲಕ್ಷಕ್ಕೂ ಹೆಚ್ಚು ಜನ ನಿರೀಕ್ಷೆಶನಿವಾರ ನಡೆಯುವ ಮೈತ್ರಿ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್‌ನಿಂದ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸಲು ಸಿದ್ಧತೆ ಮಾಡಿ ಕೊಳ್ಳಲಾಗಿದೆ.
Related Articles
Advertisement
ಅದ್ದೂರಿ ಸ್ವಾಗತ: ಚನ್ನಪಟ್ಟಣ, ರಾಮನಗರ, ಮಂಡ್ಯ ಜಿಲ್ಲೆಗಳಲ್ಲಿ ಸಂಚರಿಸಿದ ಬಿಜೆಪಿ-ಜೆಡಿಎಸ್ ಪಾದಯಾತ್ರೆ ಸಿದ್ದರಾಮಯ್ಯ ಅವರ ತವರಿಗೆ ಶುಕ್ರವಾರ ರಾತ್ರಿ ಆಗಮಿಸಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್, ಮಾಜಿ ಸಚಿವ ಅಶ್ವತ್ಥನಾರಾಯಣ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖೀಲ್ ಕುಮಾರಸ್ವಾಮಿಗೆ ಈ ವೇಳೆ ಸ್ಥಳೀಯ ಮುಖಂಡರು, ಕಾರ್ಯಕರ್ತರು ಅದ್ದೂರಿ ಸ್ವಾಗತ ನೀಡಿದರು.
ಪೌರಕಾರ್ಮಿಕರಿಂದ ಸ್ವತ್ಛತೆ: ಕಾಂಗ್ರೆಸ್ ಸಮಾವೇಶದ ಬಳಿಕ ಮೈಸೂರು ಮಹಾನಗರ ಪಾಲಿಕೆಯ ಪೌರಕಾರ್ಮಿಕರು ಮಹಾರಾಜ ಕಾಲೇಜು ಮೈದಾನ ಮತ್ತು ರಸ್ತೆಯಲ್ಲಿ ಬಿದ್ದಿದ್ದ ಕಸ, ಬ್ಯಾನರ್, ಬಂಟಿಂಗ್‌ಗಳನ್ನು ಸಂಗ್ರಹಿಸಿ ಸ್ವತ್ಛಗೊಳಿಸಿದರು. ಹಾಗೆಯೇ ರಸ್ತೆಯುದ್ದಕ್ಕೂ ಹಾಕಿದ್ದ ಫ್ಲೆಕ್ಸ್‌ಗಳನ್ನು ತೆರವು ಮಾಡಿದರು. ಅನಂತರ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ತಮ್ಮ ಪಕ್ಷಗಳ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಅಳವಡಿಸಿದರು.
ನಿವೃತ್ತಿ ಪಡೆದು ಮನೆಗೆ ಹೋಗುವಾಗ ಇನ್ನೊಬ್ಬರ ಬಗ್ಗೆ ಹೇಳುವುದು ಸ್ವಾಭಾವಿಕ. ರಾಜಕೀಯದಿಂದ ಯಾರು ನಿವೃತ್ತಿಯಾಗುತ್ತಾರೆ ಅನ್ನುವುದು ಮುಂದೆ ತಿಳಿಯಲಿದೆ. ಪೋಕ್ಸೋ ಪ್ರಕರಣದ ಸಂಬಂಧ ಕೋರ್ಟ್‌ನಲ್ಲಿ ತೀರ್ಮಾನವಾದಾಗ ಎಲ್ಲವೂ ಬಹಿರಂಗವಾಗಲಿದೆ. ಅಲ್ಲಿಯ ವರೆಗೆ ನಾನು ಏನನ್ನೂ ಮಾತನಾಡುವುದಿಲ್ಲ.-ಯಡಿಯೂರಪ್ಪ, ಮಾಜಿ ಸಿಎಂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ. ನಾನು ತಪ್ಪು ಮಾಡಿಲ್ಲ ಎನ್ನುವ ಸಿದ್ದರಾಮಯ್ಯ ಅವರ ಸಮಾವೇಶ ಇಂದಿಗೆ ಮುಗಿದಿದೆ. ಆದರೆ ಬಿಜೆಪಿ ಮಾತ್ರ ಹೋರಾಟ ನಿಲ್ಲಿಸುವುದಿಲ್ಲ. ಅವರು ರಾಜೀನಾಮೆ ನೀಡುವ ವರೆಗೆ ನಾವು ಕೂಡ ಜಗ್ಗುವುದಿಲ್ಲ ಬಗ್ಗುವುದಿಲ್ಲ.
– ಆರ್. ಅಶೋಕ್, ವಿಪಕ್ಷ ನಾಯಕ ಧೈರ್ಯ ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡ ಬೇಕು. ನಪುಂಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನರು ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಜನರಿಗೆ ಗೊತ್ತಿದೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್… ಹುಷಾರು.
-ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ