Advertisement

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

05:02 PM Nov 24, 2024 | Team Udayavani |

ರಾಮನಗರ: ಚನ್ನಪಟ್ಟಣ ವಿಧಾನಸಭಭಾ ಚುನಾ ವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರ ಸೋಲಿನ ಬಳಿಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಗಾಯದ ಮೇಲೆ ಬರೆ ಎಳೆದಿದ್ದು, ನಮ್ಮ ಗೆಲುವಿಗೆ ಬಿಜೆಪಿ ಮತ್ತು ಜೆಡಿಎಸ್‌ ಮುಖಂಡರು ಸಹಕಾರ ನೀಡಿದ್ದಾರೆ ಎಂದು ಭಾನುವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ‘ಈ ಚುನಾವಣೆಯಲ್ಲಿ ಪಕ್ಷಾತೀತವಾಗಿ ಅನೇಕರು ನಮಗೆ ಸಹಾಯ ಮಾಡಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 16,000 ಮತಗಳನ್ನು ಪಡೆದಿತ್ತು. ಲೋಕಸಭೆ ಚುನಾವಣೆಯಲ್ಲಿ ಅದು ಹೆಚ್ಚಾಯಿತು’ ಎಂದು ಹೇಳಿದರು.

ಜೆಡಿಎಸ್ ಮತ್ತು ಬಿಜೆಪಿಯ ಅನೇಕ ಜನರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ನೇರವಾಗಿ ಮತ್ತು ಪರೋಕ್ಷವಾಗಿ ನಮಗೆ ಬೆಂಬಲ ನೀಡದಿದ್ದರೆ, ನಮಗೆ ಇಷ್ಟು ಮತಗಳು ಬರುತ್ತಿರಲಿಲ್ಲ. ಅವರನ್ನು ನಾನು ಅಭಿನಂದಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆಯಲ್ಲಿ 19 ಸ್ಥಾನಗಳನ್ನು ಹೊಂದಿದ್ದ ಜೆಡಿಎಸ್ ಈಗ 18ಕ್ಕೆ ಕುಸಿದಿದೆ ಎಂದು ವ್ಯಂಗ್ಯವಾಡಿದರು. ಮತದಾರರನ್ನು ಶ್ಲಾಘಿಸಿದ ಡಿ.ಕೆ.ಶಿವಕುಮಾರ್, ಚನ್ನಪಟ್ಟಣ ಕ್ಷೇತ್ರದ ಅಭಿವೃದ್ಧಿಗೆ ಯೋಗೇಶ್ವರ್ ಪರ ಜನರ ತೀರ್ಪು ಇದು ಎಂದರು.

ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಕುರಿತು ಬಿಜೆಪಿ ಅಥವಾ ಜೆಡಿಎಸ್‌ನಿಂದ ತತ್ ಕ್ಷಣದ ಪ್ರತಿಕ್ರಿಯೆ ಬಂದಿಲ್ಲ.

Advertisement

ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಅವರು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ 25,413 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next