Advertisement
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಣವೇ ಅಲ್ಲದ ವಿಷಯವನ್ನು ಮುಂದಿಟ್ಟುಕೊಂಡು ಯಾತ್ರೆ ಮಾಡುತ್ತಿದ್ದಾರೆ. ರಾಜಕೀಯ ವಿಷಯವನ್ನು ಮುಂದಿಟ್ಟು ಸರಕಾರ ಮತ್ತು ಕಾಂಗ್ರೆಸ್‌ಗೆ ಕೆಟ್ಟ ಹೆಸರು ತರಬೇಕು ಎಂದು ಬಿಜೆಪಿ – ಜೆಡಿಎಸ್ ಪಾದಯಾತ್ರೆ ಆಯೋಜಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ನೋಟಿಸ್ ಕೊಟ್ಟಿರುವುದರಲ್ಲಿ ಅಧಿಕಾರ ದುರುಪಯೋಗ ಕಾಣಿಸುತ್ತಿದೆ. ಆದ್ದರಿಂದ ಜನರಿಗೆ ಸತ್ಯ ತಿಳಿಸುವ ಕೆಲಸವನ್ನು ಕಾಂಗ್ರೆಸ್ ಮಾಡಲಿದೆ ಎಂದರು.
ಪಶ್ಚಿಮ ಘಟ್ಟಗಳ ರಕ್ಷಣೆ ಉದ್ದೇಶದಿಂದ ಕಸ್ತೂರಿರಂಗನ್ ವರದಿಯನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಕೇಂದ್ರ ಸರಕಾರದ್ದು. ರಾಜ್ಯ ಸರಕಾರಗಳು ವರದಿಯಲ್ಲಿ ಕೆಲವು ಬದಲಾವಣೆ ಮಾಡಲು ಸೂಚಿಸಬಹುದಷ್ಟೇ. ಜನ ವಸತಿಗೆ ತೊಂದರೆಯಾಗದ ರೀತಿಯಲ್ಲಿ ರಾಜ್ಯ ಸರಕಾರಗಳ ಸಲಹೆಯನ್ನು ಪರಿಗಣಿಸಿ ಕೇಂದ್ರ ಸರಕಾರ ತೀರ್ಮಾನ ಕೈಗೊಳ್ಳಬೇಕು ಎಂದು ರಮಾನಾಥ ರೈ ಆಗ್ರಹಿಸಿದರು. ಮುಖಂಡರಾದ ಎಂ.ಶಶಿಧರ ಹೆಗ್ಡೆ, ಕೆ.ಅಶ್ರಫ್, ನವೀನ್ ಡಿ’ಸೋಜಾ, ಹರಿನಾಥ್, ಅಪ್ಪಿ, ಟಿ.ಕೆ.ಸುಧೀರ್, ಎಂ.ಜಿ.ಹೆಗ್ಡೆ, ಗಣೇಶ್ ಪೂಜಾರಿ, ಕಿರಣ್ ಮೊದಲಾದವರು ಉಪಸ್ಥಿತರಿದ್ದರು.