Advertisement
ಮಿತ್ರಪಕ್ಷಗಳು ರಾಜ್ಯಪಾಲರು ಅಭಿ ಯೋಜನೆಗೆ ಅನುಮತಿ ನೀಡಿದರೂ ರಾಜೀ ನಾಮೆ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಸಿಎಂ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿವೆ.
Related Articles
Advertisement
ರಾಜೀನಾಮೆ ಕೊಟ್ಟುಶುದ್ಧ ವ್ಯಕ್ತಿತ್ವ ಸಾಬೀತುಪಡಿಸಿ
ಕಾಂಗ್ರೆಸ್‌ನ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರಕಾರ ನಡೆಯುತ್ತಿದೆ. ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್ ಸ್ವಾಗತ ಮಾಡಬೇಕಿತ್ತು. ತನಿಖೆ ಯಾಗಿ ಸ್ವತ್ಛವಾಗಿ ಹೊರಬಂದರೆ ಪರಿಶುದ್ಧ ಎಂದು ನಂಬಬಹುದು. ಅದನ್ನು ಬಿಟ್ಟು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ ಎಂದು ಆರ್. ಅಶೋಕ್ ದೂರಿದರು. ಭ್ರಷ್ಟಾಚಾರಕ್ಕೆ ಕಾಂಗ್ರೆಸ್
ಹೈಕಮಾಂಡ್ ಬೆಂಬಲ
ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದಾರೆ. ಜತೆಗೆ ಪ್ರಕರಣ ಮುಚ್ಚಿಹಾಕಲು ಬೇಕಾ ದವ ರನ್ನು ನೇಮಿಸಿದ್ದಾರೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಬೆಂಬಲಿಸಿದೆ. ಯಾವ ನೈತಿಕತೆ ಇಟ್ಟುಕೊಂಡು ಇವರು ಹೋರಾಟ ಮಾಡುತ್ತಾರೆ? ರಾಜ್ಯದ ಕಾಂಗ್ರೆಸ್ ಸರಕಾರವು ದಿಲ್ಲಿ ಹೈಕಮಾಂಡ್‌ಗೆ ಎಟಿಎಂ ಆಗಿದೆ. ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಆಡ್ವಾಣಿ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಆದರೆ ಈ ಪರಂಪರೆ ಕಾಂಗ್ರೆಸ್‌ಗಿಲ್ಲ. ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅಜೆಂಡಾವೇ ಭ್ರಷ್ಟಾಚಾರ ಎಂದರು. ಸಿದ್ದರಾಮಯ್ಯ ವಿರುದ್ಧ 65 ಪ್ರಕರಣಗಳಿದ್ದು, ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಅಂದ ಮೇಲೆ ಅವರು ಹೇಗೆ ಪರಿಶುದ್ಧ ಎನ್ನುವುದು ತಿಳಿಯುತ್ತಿಲ್ಲ. ತನಿಖೆ ನಡೆದು ಅವರು ಸ್ವತ್ಛ ಎಂಬುದು ಸಾಬೀತಾದರೆ ಪರಿಶುದ್ಧ ನಾಯಕ ಎಂದು ನಂಬಬಹುದು.
-ಆರ್. ಅಶೋಕ್, ವಿಪಕ್ಷ ನಾಯಕ