Advertisement

CM Siddaramaiah ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

01:32 AM Aug 19, 2024 | Team Udayavani |

ಬೆಂಗಳೂರು: ರಾಜ್ಯಪಾಲರ ನಡೆ ಖಂಡಿಸಿ ಹೋರಾಟ ನಡೆಸಲು ರಾಜ್ಯ ಕಾಂಗ್ರೆಸ್‌ ಮುಂದಾಗಿದ್ದರೆ, ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸೋಮವಾರ ಪ್ರತಿಭಟನೆ ನಡೆಸಲು ನಿರ್ಧರಿಸಿವೆ.

Advertisement

ಮಿತ್ರಪಕ್ಷಗಳು ರಾಜ್ಯಪಾಲರು ಅಭಿ ಯೋಜನೆಗೆ ಅನುಮತಿ ನೀಡಿದರೂ ರಾಜೀ ನಾಮೆ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿರುವ ಸಿಎಂ ವಿರುದ್ಧ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿವೆ.

ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆಗೆ ಆಗ್ರಹಿಸಿ ಈಗಾಗಲೇ ಬೆಂಗ ಳೂರಿನಿಂದ ಮೈಸೂರಿನವರೆಗೆ ವಿಪಕ್ಷಗಳು ಪಾದಯಾತ್ರೆ ನಡೆಸಿದ್ದವು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರಕಾರವು ರಾಜ್ಯಪಾಲರ ವಿರುದ್ಧ ಪ್ರತಿಭಟನೆ ನಡೆಸಿದರೆ, ಬಿಜೆಪಿ ಮತ್ತು ಜೆಡಿಎಸ್‌ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಮಾಡಲಿವೆ. ತಪ್ಪು ಮುಚ್ಚಿಕೊಳ್ಳಲು ರಾಜ್ಯಪಾಲರು ಹಾಗೂ ಕೇಂದ್ರದ ವಿರುದ್ಧ ಕಾಂಗ್ರೆಸ್‌ ಆರೋಪ ಹೊರಿಸುತ್ತಿದೆ ಎಂಬ ಜನಾಭಿಪ್ರಾಯವನ್ನು ಮೈತ್ರಿ ನಾಯಕರು ಬಿತ್ತಲಿದ್ದಾರೆ.

ಈ ಕುರಿತು ರವಿವಾರ ಪಕ್ಷದ ಕಚೇರಿ ಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌, ಮುಡಾ ಹಗರಣ ನಡೆಸಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಸೋಮವಾರ ಬೆಳಗ್ಗೆ 11.30ಕ್ಕೆ ಪ್ರತಿಭಟಿಸಲಾಗುವುದು ಎಂದರು.

Advertisement

ರಾಜೀನಾಮೆ ಕೊಟ್ಟು
ಶುದ್ಧ ವ್ಯಕ್ತಿತ್ವ ಸಾಬೀತುಪಡಿಸಿ
ಕಾಂಗ್ರೆಸ್‌ನ ನಡಿಗೆ, ಭ್ರಷ್ಟಾಚಾರದ ಕಡೆಗೆ ಎಂಬಂತಾಗಿದೆ. ಈ ಸರಕಾರ ಬಂದಾಗ ಜನರು ಗ್ಯಾರಂಟಿಗಳ ಬಗ್ಗೆ ಭರವಸೆ ಇಟ್ಟುಕೊಂಡಿದ್ದರು. ಆದರೆ ಜನರ ಅಪೇಕ್ಷೆಗೆ ವಿರುದ್ಧವಾಗಿ ಸರಕಾರ ನಡೆಯುತ್ತಿದೆ. ಈಗ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್‌ ಸ್ವಾಗತ ಮಾಡಬೇಕಿತ್ತು. ತನಿಖೆ ಯಾಗಿ ಸ್ವತ್ಛವಾಗಿ ಹೊರಬಂದರೆ ಪರಿಶುದ್ಧ ಎಂದು ನಂಬಬಹುದು. ಅದನ್ನು ಬಿಟ್ಟು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ ಎಂದು ಆರ್‌. ಅಶೋಕ್‌ ದೂರಿದರು.

ಭ್ರಷ್ಟಾಚಾರಕ್ಕೆ ಕಾಂಗ್ರೆಸ್‌
ಹೈಕಮಾಂಡ್‌ ಬೆಂಬಲ
ಸಿಎಂ ಸಿದ್ದರಾಮಯ್ಯ ಅಧಿವೇಶನದಲ್ಲಿ ಉತ್ತರ ಕೊಡದೆ ಪಲಾಯನ ಮಾಡಿದ್ದಾರೆ. ಜತೆಗೆ ಪ್ರಕರಣ ಮುಚ್ಚಿಹಾಕಲು ಬೇಕಾ ದವ ರನ್ನು ನೇಮಿಸಿದ್ದಾರೆ. ಹೈಕಮಾಂಡ್‌ ಕೂಡ ಸಿದ್ದರಾಮಯ್ಯ ಅವರ ಭ್ರಷ್ಟಾಚಾರವನ್ನು ಬೆಂಬಲಿಸಿದೆ. ಯಾವ ನೈತಿಕತೆ ಇಟ್ಟುಕೊಂಡು ಇವರು ಹೋರಾಟ ಮಾಡುತ್ತಾರೆ? ರಾಜ್ಯದ ಕಾಂಗ್ರೆಸ್‌ ಸರಕಾರವು ದಿಲ್ಲಿ ಹೈಕಮಾಂಡ್‌ಗೆ ಎಟಿಎಂ ಆಗಿದೆ. ಯಡಿಯೂರಪ್ಪ ಅವರ ಮೇಲೆ ಆರೋಪ ಬಂದಾಗ, ಆಡ್ವಾಣಿ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಆದರೆ ಈ ಪರಂಪರೆ ಕಾಂಗ್ರೆಸ್‌ಗಿಲ್ಲ. ಕಾಂಗ್ರೆಸ್‌ ನಾಯಕರು ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅಜೆಂಡಾವೇ ಭ್ರಷ್ಟಾಚಾರ ಎಂದರು.

ಸಿದ್ದರಾಮಯ್ಯ ವಿರುದ್ಧ 65 ಪ್ರಕರಣಗಳಿದ್ದು, ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಅಂದ ಮೇಲೆ ಅವರು ಹೇಗೆ ಪರಿಶುದ್ಧ ಎನ್ನುವುದು ತಿಳಿಯುತ್ತಿಲ್ಲ. ತನಿಖೆ ನಡೆದು ಅವರು ಸ್ವತ್ಛ ಎಂಬುದು ಸಾಬೀತಾದರೆ ಪರಿಶುದ್ಧ ನಾಯಕ ಎಂದು ನಂಬಬಹುದು.
-ಆರ್‌. ಅಶೋಕ್‌, ವಿಪಕ್ಷ ನಾಯಕ

Advertisement

Udayavani is now on Telegram. Click here to join our channel and stay updated with the latest news.