ಬೆಂಗಳೂರು: ವಿಧಾನ ಪರಿಷತ್ ಕಲಾಪ ಆರಂಭದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ಸದಸ್ಯರ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ದೂರು ನೀಡಿದೆ.
ಸಭಾಪತಿಗಳು ಬಹುಮತ ಕಳೆದುಕೊಂಡಿದ್ದಾರೆ. ಅವರನ್ನು ಕೆಳಗಿಳಿಸುವ ಸಂಬಂಧ ತಾವು ಮಧ್ಯಪ್ರವೇಶಿಸಬೇಕು. ನಮಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ.
ಗಲಾಟೆಯ ವೇಳೆ ಸಭಾಪತಿ ಪೀಠದಲ್ಲಿ ಕುಳಿತಿದ್ದ ಪರಿಷತ್ ಸದಸ್ಯ ಚಂದ್ರಶೇಖರ ಪಾಟೀಲ್ ವಿರುದ್ಧವೂ ದೂರು ನೀಡಿದೆ. ಕಾಂಗ್ರೆಸ್ ವರ್ತನೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.
ಇದನ್ನೂ ಓದಿ:ಪರಿಷತ್ ನಲ್ಲಿ ನಡೆದ ಘಟನೆಗೆ ಕಾಂಗ್ರೆಸ್ ಕಾರಣ: ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ
ಡಿಸಿಎಂ ಲಕ್ಷ್ಮಣ ಸವದಿ, ಸಚಿವ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ್, ಮಾಧುಸ್ವಾಮಿ, ರಮೇಶ್ ಗೌಡ, ಬಸವರಾಜ್ ಹೊರಟ್ಟಿ, ಪುಟ್ಟಣ್ಣ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.