Advertisement

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

05:08 PM Nov 26, 2024 | Team Udayavani |

ದಾವಣಗೆರೆ: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ರಚನೆಗೆ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ರಚನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಸಹಮತ ವ್ಯಕ್ತಪಡಿಸಿದ್ದಾರೆ ಎನ್ನುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ರಚನೆಯತ್ತ ಮುನ್ನುಡಿ ಬರೆದರು.

ಮಾಜಿ ಸಚಿವರು, ಮಾಜಿ ಶಾಸಕರು ಎಂಬುದಾಗಿ ಕರೆಯುವುದಕ್ಕೆ ನನಗೆ ಬಹಳ ನೋವಾಗುತ್ತದೆ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯದ ಎಲ್ಲ 224 ಕ್ಷೇತ್ರಗಳಲ್ಲಿ ಪ್ರವಾಸ ನಡೆಸುತ್ತೇನೆ. ಅಂತಹ ವಾತಾವರಣವೂ ಇದೆ. ಪ್ರತಿ ದಿನ 2-3 ವಿಧಾನಸಭಾ ಕ್ಷೇತ್ರದಲ್ಲಿ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ ಅವರು ರಾಜ್ಯದ ಜನತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಹಂಬಲವಿದೆ. ಆ ಕಾರ್ಯ ದಾವಣಗೆರೆಯಿಂದಲೇ ಪ್ರಾರಂಭವಾಗಲಿದೆ ಎಂದು ತಿಳಿಸಿದರು.

ರಾಜ್ಯ ಬಿಜೆಪಿಯಲ್ಲಿ ಒಡಕು ಇರುವುದು ನಿಜ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೊಂದಿಗೆ ಚರ್ಚಿಸಿ, ಎಲ್ಲವನ್ನೂ ಸರಿ ಪಡಿಸಿಕೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಬಿಎಸ್‌ವೈ ಉತ್ತರಿಸಿದರು.

Advertisement

ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಕಾಂಗ್ರೆಸ್‌ನ ಕೆಲ ನಾಯಕರ ಹೇಳಿಕೆ ಕುರಿತಂತೆ, ಅಂತಹದ್ದು ಯಾವುದೂ ಇಲ್ಲ ಎಂದರು.

ಬಿ.ವೈ. ವಿಜಯೇಂದ್ರ ಮುಂದಿನ ಮುಖ್ಯಮಂತ್ರಿ ಎಂಬ ಕೂಗು ಕೇಳಿ ಬರುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next