Advertisement
ಬಿಜೆಪಿ- ಜೆಡಿಎಸ್ ಮಧ್ಯೆ “ಬಂಧುತ್ವ” ನಿಶ್ಚಿತ ವಾಗಬೇಕಾದರೆ ಮಂಡ್ಯ ಲೋಕಸಭಾ ಕ್ಷೇತ್ರ ಬಿಟ್ಟು ಕೊಡಬೇಕೆಂದು ಜೆಡಿಎಸ್ ಪಟ್ಟು ಹಿಡಿದಿದೆ. ಬಿಜೆಪಿ ವರಿಷ್ಠರು ಬಹುತೇಕ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕೆ ಇಳಿಯುವ ಸಾಧ್ಯತೆ ಕ್ಷೀಣಿಸಿದೆ.
ಎಚ್.ಡಿ. ದೇವೆಗೌಡರ ನೇತೃತ್ವದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ರವಿವಾರ ಜೆಡಿಎಸ್‌ನ ಬೃಹತ್ ಸಮಾವೇಶ ನಡೆಯಲಿದೆ.
Related Articles
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕ್ಷೇತ್ರ ಬದಲಾಯಿಸಲಿದ್ದಾರೆ ಎಂಬ ಮಾತು ಬಿಜೆಪಿ ವಲಯದಲ್ಲಿ ದಟ್ಟವಾಗಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜತೆಗೆ ಶೋಭಾ ಹೆಸರು ತಳುಕು ಹಾಕಿಕೊಳ್ಳುತ್ತಿದೆ. ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೇಲೆ ಸಿ.ಟಿ. ರವಿ ಕಣ್ಣಿಟ್ಟಿದ್ದಾರೆ. ಎಸ್.ಟಿ. ಸೋಮಶೇಖರ್ ಬಿಜೆಪಿ ತೊರೆದರೆ ಶೋಭಾ ಕರಂದ್ಲಾಜೆ ಯಶವಂತಪುರ ಕ್ಷೇತ್ರದಿಂದ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
Advertisement
ನಾಯಿ ಹಸಿದಿತ್ತು, ಅನ್ನ ಹಳಸಿತ್ತು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. 2018ರಲ್ಲಿ ಯಾವ ಅನ್ನ ಹಳಸಿತ್ತು, ಯಾವ ನಾಯಿ ಹಸಿದಿತ್ತು ಎಂಬುದನ್ನು ಸ್ಮರಿಸಿಕೊಳ್ಳಲಿ. ಎಲ್ಲದಕ್ಕೂ ಮುಂದೆ ಉತ್ತರ ಸಿಗಲಿದೆ. – ಎಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ