Advertisement

Lok Sabha Polls: 28 ಕ್ಷೇತ್ರಗಳನ್ನೂ ಬಿಜೆಪಿ-ಜೆಡಿಎಸ್‌ ಗೆದ್ದು ಹೊಸ ದಾಖಲೆ: ವಿಜಯೇಂದ್ರ

08:17 PM Mar 14, 2024 | Team Udayavani |

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಒಂದಾಗಿ 28 ಕ್ಷೇತ್ರಗಳನ್ನೂ ಗೆದ್ದು ಹೊಸ ದಾಖಲೆ ಬರೆಯುವ ಜತೆಗೆ ಪ್ರಧಾನಿ ಮೋದಿ ಅವರ ಕೈ ಬಲಪಡಿಸುವ ಗುರಿ ಹೊಂದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

Advertisement

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 20 ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕೆಲವರಿಗೆ ಟಿಕೆಟ್‌ ಸಿಕ್ಕಿಲ್ಲ. ಕೆಲ ಹೊಸ ಮುಖಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡುವ ಕೆಲಸವೂ ಆಗಿದೆ. ಅಭ್ಯರ್ಥಿಗಳ ಆಯ್ಕೆಯನ್ನು ಯಾರೋ ಒಬ್ಬರು ಕುಳಿತು ಮಾಡಿರುವುದಲ್ಲ. ಕೇಂದ್ರದ ವರಿಷ್ಠರೆಲ್ಲರೂ ಚರ್ಚಿಸಿ, ನಿರ್ಧಾರ ತೆಗೆದುಕೊಂಡಿದ್ದಾರೆ ಎಂದರು.

ಯದುವೀರ್‌, ಡಾ.ಮಂಜುನಾಥ್‌ ಅಚ್ಚರಿಯ ಆಯ್ಕೆ: ಮೈಸೂರಿನ ರಾಜಮನೆತನದ ಬಗ್ಗೆ ವಿಶೇಷವಾಗಿ ಹಳೆ ಮೈಸೂರು ಭಾಗದ ಜನತೆಗೆ ವಿಶೇಷ ಗೌರವ, ಪ್ರೀತಿ ಇದೆ. ಈ ಹಿನ್ನೆಲೆಯಲ್ಲಿ  ಮೈಸೂರು-ಕೊಡಗು ಕ್ಷೇತ್ರಕ್ಕೆ ಯದುವೀರ ಒಡೆಯರ್‌ ಅವರಿಗೆ ಟಿಕೆಟ್‌ ನೀಡಲು ವರಿಷ್ಠರು ತೀರ್ಮಾನ ಮಾಡಿದರು.  ಬೆಂಗಳೂರು ಗ್ರಾಮೀಣ ಕ್ಷೇತ್ರಕ್ಕೆ ಡಾ. ಮಂಜುನಾಥ್‌ ಅವರನ್ನು ಬಿಜೆಪಿ ಹುರಿಯಾಳಾಗಿ ಆಯ್ಕೆ ಮಾಡಿದೆ ಎಂದರು.

ಈ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಹೆಚ್ಚು ಉತ್ಸಾಹ ತುಂಬಬೇಕಿದೆ.  ರಾಜ್ಯದ ಎಲ್ಲ ನಾಯಕರು ಒಗ್ಗಟ್ಟಾಗಿ, ಒಂದಾಗಿ ಶ್ರಮಿಸಲಿದ್ದಾರೆ. ಕಾರ್ಯಕರ್ತರ ಶ್ರಮ, ಮೋದಿ ಪರ ವಾತಾವರಣ, ಮೋದಿ ಜನಪ್ರಿಯತೆಯನ್ನು ಮತವಾಗಿ ಪರಿವರ್ತಿಸುವ ಕಾರ್ಯಕರ್ತರ ಶಕ್ತಿಯ ಮೇಲೆ ವಿಶ್ವಾಸವಿದೆ.ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

Advertisement

Udayavani is now on Telegram. Click here to join our channel and stay updated with the latest news.

Next