Advertisement

ಕುಮ್ಕಿ, ಕಾನ-ಬಾಣೆ ಜಮೀನು, ಮೂಲಗೇಣಿ ಸಮಸ್ಯೆ 15 ದಿನಗಳೊಳಗೆ ಸಿಎಂ ಸಭೆ: ನಳಿನ್‌

11:50 PM Nov 05, 2020 | mahesh |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಮ್ಕಿ, ಕಾನ- ಬಾಣೆ ಜಮೀನು, ಮೂಲಗೇಣಿ ಮತ್ತು ಗೇರು ಬೀಜ ಸಂಬಂಧಿತ ಸಮಸ್ಯೆಗಳಿದ್ದು, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ 15 ದಿನಗಳೊಳಗೆ ಸಭೆ ನಡೆಸಿ ಚರ್ಚಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

Advertisement

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಲೋಡು ಮರಳಿಗೆ 6,000 ರೂ. ನಿಗದಿಪಡಿಸಿ (ಯೂನಿಟ್‌ಗೆ 2,000 ರೂ.ನಂತೆ) ಮರಳು ನೀತಿಯನ್ನು ಜಾರಿಗೊಳಿಸುವ ಕುರಿತಂತೆ 15 ದಿನಗಳೊಳಗೆ ಬೆಂಗಳೂರಿನಲ್ಲಿ ಸಭೆ ನಡೆಸುವುದಾಗಿಯೂ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಗೇರು ಬೀಜ ನೀತಿಯನ್ನು ಜಾರಿಗೊಳಿಸುವ ಬಗ್ಗೆಯೂ ಸಭೆ ನಡೆಸಲು ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ ಎಂದರು.

ಮುಂದೆ ನಡೆಯಲಿರುವ ಲೋಕಸಭೆ, ರಾಜ್ಯಸಭೆ ಮತ್ತು ವಿಧಾನಸಭೆಯ ಉಪ ಚುನಾವಣೆಗೆ ಸಂಬಂಧಿಸಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಈ ಬಗ್ಗೆಯೂ ಸಭೆಯಯಲ್ಲಿ ಚರ್ಚಿಸಲಾಗಿದೆ. ಒಂದು ವಾರದೊಳಗೆ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಾಗುವುದು ಎಂದರು.

ಬಸನಗೌಡ ಪಾಟೀಲ್‌ ವಿಷಯ ಶಿಸ್ತು ಸಮಿತಿಗೆ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ್‌ ಅವರು ಪಕ್ಷಕ್ಕೆ ಮುಜುಗರ ಆಗುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಈ ಬಗ್ಗೆ ಕೇಂದ್ರದ ಶಿಸ್ತು ಸಮಿತಿಯ ಗಮನಕ್ಕೆ ತರಲಾಗಿದೆ ಎಂದರು.

ಆಂತರಿಕ ಜಗಳವೇ ಕಾಂಗ್ರೆಸ್‌ಗೆ ಮುಳುವು
ಕಾಂಗ್ರೆಸ್‌ ನಾಯಕರ ಆಂತರಿಕ ಜಗಳದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಯಾವ ಸ್ಥಾನವನ್ನೂ ಉಳಿಸಿಕೊಳ್ಳುವ ಸ್ಥಿತಿಯಲ್ಲಿ ಇಲ್ಲ. ಸಿದ್ದರಾಮಯ್ಯ ಅವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಆಗಿದ್ದ ಅವರು ಜವಾಬ್ದಾರಿ ಮೀರಿ ಮಾತನಾಡುತ್ತಿದ್ದಾರೆ. ಡಿ.ಕೆ. ಶಿವಕುಮಾರ್‌ ಪ್ರಭಾವ ಜಾಸ್ತಿಯಾಗಿ ತಾನು ಮೂಲೆ ಗುಂಪಾಗ ಬಹುದೆಂಬ ಭೀತಿ ಸಿದ್ದರಾಮಯ್ಯನವರನ್ನು ಕಾಡುತ್ತಿದೆ ಎಂದು ನಳಿನ್‌ ಟೀಕಿಸಿದರು.

Advertisement

ಮುಂದಿನ ಎರಡೂವರೆ ವರ್ಷಗಳ ಕಾಲವೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯ ಲಿದ್ದಾರೆ. ಸಿದ್ದರಾಮಯ್ಯ ಶೀಘ್ರದಲ್ಲಿಯೇ ವಿಪಕ್ಷ ನಾಯಕ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ ಎಂದರು.  ಕಾಂಗ್ರೆಸ್‌ನಲ್ಲಿ ಶಾಸಕರಿಗೆ ರಕ್ಷಣೆ ಇಲ್ಲವಾಗಿದ್ದು, ಸುಮಾರು 15 ಮಂದಿ ಶಾಸಕರು ಬಿಜೆಪಿಗೆ ಸೇರಲು ಬಾಗಿಲಲ್ಲಿ ನಿಂತಿದ್ದಾರೆ ಎಂದು ಆರೋಪಿಸಿದರು.

ಭಾಗ್ಯದ ವರ್ಷ
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರಗಳ ಆಡಳಿತವಿದ್ದು, ಬಿಜೆಪಿ ಕಾರ್ಯಕರ್ತರಿಗೆ ಇದು ಭಾಗ್ಯದ ವರ್ಷ. ಸುವರ್ಣ ಯುಗವೂ ಹೌದು ಎಂದು ನಳಿನ್‌ ಅವರು ಈ ಮೊದಲು ಕಾರ್ಯಕಾರಿಣಿ ಸಭೆಯ ಅಧ್ಯಕ್ಷ ಭಾಷಣದಲ್ಲಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next