Advertisement

ರಾಜಭವನ ಚಲೋ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ? ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನೆ

12:06 PM Jan 20, 2021 | Team Udayavani |

ಬೆಂಗಳೂರು: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಗೆ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ನಿಮ್ಮ ಅಧಿಕಾರದ ಅವಧಿಯಲ್ಲಿ ರೈತರ ಆತ್ಮಹತ್ಯೆ ನಡೆದಾಗ ಸುಮ್ಮನಿದ್ದು, ಈಗ ರಾಜಭವನ ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದೆ.

Advertisement

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಕರ್ನಾಟಕ, ಕಾಂಗ್ರೆಸ್ ಪ್ರತಿಭಟನೆಯ ಬಗ್ಗೆ ವ್ಯಂಗ್ಯವಾಡಿದೆ.

2013-14 – 104, 2014-15 – 128, 2015-16 – 1483, 2016-17 – 1185, 2018-19 – 900 ಹೀಗೆ 3800 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅವರ ಕಣ್ಣೀರು ಒರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ ಎಂದು ಟೀಕಿಸಿದೆ.

ಇದನ್ನೂ ಓದಿ:ಸ್ವಾತಂತ್ರ್ಯ ಹೋರಾಟದಂತೆ ರೈತರು ಪ್ರತಿಭಟನೆ ನಡೆಸಬೇಕು: ಡಿ ಕೆ ಶಿವಕುಮಾರ್

ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗಳಿಗೆ ಕಾರಣವಾದ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ. ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ ಎಂದು ಬಿಜೆಪಿ ಪ್ರಶ್ನಿಸಿದೆ.

Advertisement

2019 ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡುವುದುದಾಗಿ ಕಾಂಗ್ರೆಸ್ ಘೋಷಿಸಿತ್ತು. ನರೇಂದ್ರ ಮೋದಿ ಸರ್ಕಾರ ಆ ಕಾರ್ಯ ಮಾಡಿದಾಗ ಮಾತ್ರ ಬೀದಿಗೆ ಬಂದು ಬೊಬ್ಬೆ ಹೊಡೆಯುತ್ತಿದ್ದಾರೆ. ನಿಮ್ಮ ದುರಾಡಳಿತದಲ್ಲಿ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ʼರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼ ಎಂದು ಹೇಳಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದೆ.

ಇದನ್ನೂ ಓದಿ: ಸಚಿವ ಬಿ.ಸಿ. ಪಾಟೀಲ್‌ ರೈತರ ಕ್ಷಮೆ ಕೇಳಬೇಕು: ಶಾಸಕ ಪುಟ್ಟರಾಜು ಆಗ್ರಹ

ಪ್ರಧಾನಿ ಮೋದಿ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ಕಾಯ್ದೆ ಜಾರಿಗೆ ತಂದಿತು. ರೈತರು ನೇರವಾಗಿ ಮಾರಾಟ ಮಾಡಿದರೆ ಹೆಚ್ಚು‌ ಲಾಭಗಳಿಸುತ್ತಾರೆ ಎಂಬುದು ಲೋಕ ಸತ್ಯ. ಆದರೆ ನೀವು ಮಾತ್ರ ಇದನ್ನು ವಿರೋಧಿಸುತ್ತಿದ್ದೀರಿ. ಕಾಂಗ್ರೆಸ್ ನವರೇ  ನೀವೇಕೆ ದಲ್ಲಾಳಿಗಳ ಪರ ವಕಾಲತ್ತು ವಹಿಸುತ್ತೀರಿ ಎಂದು ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next