Advertisement

Vijayapura: ಇಂಧನ ದರ ಏರಿಕೆ ವಿರುದ್ಧ ಪ್ರತಿಭಟಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಗಣಿಹಾರ

11:36 AM Jun 20, 2024 | keerthan |

ವಿಜಯಪುರ: ರಾಜ್ಯದ ಕಾಂಗ್ರೆಸ್ ಸರ್ಕಾರ ಇಂಧನ ದರ ಏರಿಕೆಯನ್ನು ಸಮರ್ಥಿಸಿರುವ ಕೆಪಿಸಿಸಿ ವಕ್ತಾರ ಎಸ್.ಎಂ.ಪಾಟೀಲ ಗಣಿಹಾರ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಪಕ್ಷಕ್ಕೆ ನೈತಿಕತೆ ಇಲ್ಲ ಎಂದು ಹರಿಹಾಯ್ದಿದ್ದಾರೆ.

Advertisement

ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮನಬಂದಂತೆ ಇಂಧನ ದರ ಏರಿಕೆ ಮಾಡಿದಾಗ ಸಾವಿರ ರೂ. ದರ ಏರಿಕೆಯಾದರೂ ದೇಶಕ್ಕಾಗಿ ಸ್ವಾಗತಿಸುವುದಾಗಿ ಹೇಳುತ್ತಿದ್ದ ಬಿಜೆಪಿ ನಾಯಕರು, ರಾಜ್ಯದಲ್ಲಿ ಕೇವಲ 2-3 ರೂ. ತೆರಿಗೆ ಹೇರಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ದೇಶದಲ್ಲಿ ಅಗತ್ಯ ವಸ್ತುಗಳ ದರ ಏರಿಕೆ ಮಾಡುತ್ತಿದ್ದು ಗೃಹ ಬಳಕೆಯ ಸಿಲಿಂಡರ್ ದರ ಸಾವಿರ ರೂ. ಗಡಿ ದಾಟಿದರೂ ಮೌನಕ್ಕೆ ಶರಣಾಗಿರುವ ರಾಜ್ಯದ ಬಿಜೆಪಿ ನಾಯಕರು, ಮಕ್ಕಳು ಕುಡಿಯುವ, ಹಾಲು, ಮೊಸರು, ಮಜ್ಜಿಗೆ ಮೇಲೂ ಜಿಎಸ್ಟಿ ಹಾಕಿ ದರ ಏರಿಕೆ ಮಾಡಿದರೂ ಬಿಜೆಪಿ ಮುಖಂಡರು ಮೌನಕ್ಕೆ ಶರಣಾಗಿದ್ದಾರೆ ಎಂದು ಕುಟುಕಿದರು.

ಜನ ಬಿಜೆಪಿ ಪಕ್ಷವನ್ನು ತಿರಸ್ಕರಿಸಿದರೂ ಅವಸರವಾಗಿ ಹಿಂಬಾಗಿಲಿನಿಂದ ಅಧಿಕಾರ ಹಿಡಿದಿರುವ ನ ನರೇಂದ್ರ ಮೋದಿ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕರಿಸುತ್ತಲೇ ನೀಟ್ ಪರೀಕ್ಷೆಯ ಹಗರಣದ ಮೂಲಕ ದೇಶದ ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಕುತ್ತು ತರುವ ಕೊಡುಗೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ಅರ್ಥಶಾಸ್ತ್ರ ಪರಿಣಿತ ಸಿದ್ದರಾಮಯ್ಯ ಸರ್ಕಾರ ಜನಪರ ಹಾಗೂ ಅಭಿವೃದ್ಧಿ ಪರ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸಿದ್ದಾರೆ. ಇಂಥ ಸಂದರ್ಭದಲ್ಲಿ ಸಾಂದರ್ಭಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದು ಚುನಾವಣೆ ಅಥವಾ ಮತ ಹಾಕಲಿ ಎಂದು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದುದಲ್ಲ. ಎಲ್ಲ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸಲು ಜಾರಿಗೆ ತಂದಿರುವ ಯೋಜನೆಗಳು. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷಿತ ಬೆಂಬಲ ಸಿಕ್ಕಿಲ್ಲ ಎಂಬುದು ಸರಿಯಲ್ಲ ಎಂದರು.

Advertisement

ಮೋದಿ ಸರ್ಕಾರದ ಸಂಪುಟದಲ್ಲಿ ಅಹಿಂದ ವರ್ಗಕ್ಕೆ ಅನ್ಯಾಯ ಆಗಿದ್ದು, ಪರಿಶಿಷ್ಟ ಜಾತಿಗೆ ಮೀಸಲು ಕ್ಷೇತ್ರವಾಗಮದ ವಿಜಯಪುರದಿಂದ 7 ಬಾರಿ ಗೆಲುವು ಸಾಧಿಸಿರುವ ರಮೇಶ ಜಿಗಜಿಣಗಿ ಅವರಿಗೂ ಅನ್ಯಾಯ ಮಾಡಲಾಗಿದೆ ಎಂದು ಟೀಕಿಸಿದರು.

ದೇಶದ ಹೆದ್ದಾರಿಗಳಲ್ಲಿ ಚುನಾವಣೆ ಮುಗಿಯುತ್ತಲೇ ದರ ಏರಿಕೆಗೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಹಗರಣಗಳು ಒಂದೊಂದಾಗಿ ಹೊರ ಬರುತ್ತಿವೆ. ರಾಜ್ಯದ ನೀರಾವರಿ ಸೇರಿದಂತೆ ಇತರೆ ಅಭಿವೃದ್ಧಿ ಯೋಜನೆಗಳಿಗೆ ಘೋಷಿಸಿರುವ ಅನುದಾನವನ್ನೇ ಬಿಡುಗಡೆ ಮಾಡಿಲ್ಲ. ಹೋರಾಟ ಮಾಡುವುದಿದ್ದರೆ ಬಿಜೆಪಿ ನಾಯಕರು ಮೊದಲು ಈ ಬಗ್ಗೆ ಧ್ವನಿ ಎತ್ತಲಿ ಎಂದು ಡಾ.ರವಿ ಬಿರಾದಾರ ಆಗ್ರಹಿಸಿದರು.

ನಾಗರಾಜ ಲಂಬು ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next