ಬೀದರ: ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದ್ದು, ಒಳ್ಳೆಯ ಕೆಲಸ ಮಾಡಿದವರಿಗೆ ಉತ್ತಮ ಹುದ್ದೆಗಳು ಹುಡುಕಿಕೊಂಡು ಬರುತ್ತವೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.
ನಗರದ ಪಕ್ಷದ ಕಚೇರಿಯಲ್ಲಿ ನಡೆದ ಬಿಜೆಪಿ ಕಾನೂನು ಪ್ರಕೋಷ್ಠದ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದಲ್ಲಿ ಹೆಚ್ಚಿನ ವಕೀಲರಿಗೆ ಸಚಿವ ಸ್ಥಾನ, ಹುದ್ದೆಗಳು ನೀಡಿದ್ದು ವಿಶೇಷ ಎಂದರು.
ಪ್ರಕೋಷ್ಠದ ರಾಜ್ಯ ಸಂಚಾಲಕ ಎಸ್.ಎಸ್. ವಿಠಲಕೋರ ಮಾತನಾಡಿ, ಕಾನೂನು ವಿಷಯಗಳಲ್ಲದೆ ಸಮಾಜದ ಮುಖೀಯಾದ ಕೆಲಸಗಳನ್ನು ಸಮಾಜದ ಮಧ್ಯ ನಿರಂತರವಾಗಿ ಕೆಲಸ ಮಾಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ತಿದ್ದುಪಡಿ ಕಾಯ್ದೆಗಳ ಬಗ್ಗೆ ಜನ ಸಾಮಾನ್ಯರಲ್ಲಿ ತಿಳಿವಳಿಕೆ ಮೂಡಿಸಬೇಕು ಎಂದರು.
ಹಿರಿಯ ವಕೀಲ ಗುರುನಾಥ ಜ್ಯಾಂತಿಕರ್ ಮಾತನಾಡಿ, ವಕೀಲರು ಕೆಲಸದ ಒತ್ತಡದಲ್ಲಿದ್ದ ಸ್ವಲ್ಪ ಸಮಯ ತೆಗೆದುಕೊಂಡು ಜನ ಸಾಮಾನ್ಯರಿಗೆ ಸರ್ಕಾರದ ನೀತಿ ನಿಯಮ ತಿಳಿಸಬೇಕು ಎಂದರು.
ಪ್ರಕೋಷ್ಠನದ ಜಿಲ್ಲಾ ಸಂಚಾಲಕ ಸಂಜೀವಕುಮಾರ ಸಜ್ಜನ್ ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಕೋಷ್ಠದ ಸದಸ್ಯ ವಸಂತಕುಮಾರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೆಎಸ್‌ಐಐಡಿಸಿ ಅಧ್ಯಕ್ಷ ಡಾ| ಶೈಲೇಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅಶೋಕಕುಮಾರ ಮಾಣೂರೆ, ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ ಪಾಟೀಲ ಇದ್ದರು.