Advertisement

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

04:59 PM Nov 19, 2024 | Team Udayavani |

ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನ ಸಭಾ ಚುನಾವಣೆಗೆ ಇನ್ನೇನು ಒಂದೇ ದಿನ ಬಾಕಿ ಇರುವಂತೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ವಿನೋದ್ ತಾವ್ಡೆ ಅವರ ವಿರುದ್ಧ ಮತದಾರರಿಗೆ ಹಣ ಹಂಚಿರುವ ಆರೋಪ ಕೇಳಿ ಬಂದಿದ್ದು, ಚುನಾವಣಾ ಆಯೋಗವು ಬಿಜೆಪಿಯ ಹಿರಿಯ ನಾಯಕನ ವಿರುದ್ಧ ಮತಕ್ಕಾಗಿ ನಗದು ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದೆ.

Advertisement

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಹರಿದಾಡುತ್ತಿದ್ದು ನಲಸೋಪಾರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿನೋದ್ ತಾವ್ಡೆ ಮತ್ತು ರಾಜನ್ ನಾಯಕ್ ಅವರು ಪಾಲ್ಘರ್‌ನ ವಿವಾಂಟಾ ಹೋಟೆಲ್‌ ನಲ್ಲಿ ಸಭೆ ನಡೆಸುತ್ತಿದ್ದ ವೇಳೆ ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಬಹುಜನ ವಿಕಾಸ್ ಅಘಾಡಿ (ಬಿವಿಎ) ಕಾರ್ಯಕರ್ತರು ಆರೋಪಿಸಿದ್ದಾರೆ ಅಲ್ಲದೆ ತಾವ್ಡೆ ಅವರು ಮತದಾರರಿಗೆ ಹಂಚಲು 5 ಕೋಟಿ ನಗದು ಹಣ ಹೋಟೆಲ್ ಗೆ ತಂದಿದ್ದಾರೆ ಎಂದು ಬಹುಜನ ವಿಕಾಸ್ ಅಘಾಡಿ ಕಾರ್ಯಕರ್ತರು ಆರೋಪಿಸಿದ್ದಾರೆ. ವಿಡಿಯೋ ದಲ್ಲಿ ಕಾರ್ಯಕರ್ತರು ಕೈಯಲ್ಲಿ ನೋಟಿನ ಕಂತೆಗಳನ್ನು ಹಿಡಿದುಕೊಂಡು ಪ್ರದರ್ಶಿಸುತ್ತಿರುವುದು ಕಂಡು ಬಂದಿದೆ. ಆದರೆ ಬಹುಜನ ವಿಕಾಸ್ ಅಘಾಡಿ ಕಾರ್ಯಕರ್ತರ ಆರೋಪವನ್ನು ಬಿಜೆಪಿ ನಾಯಕ ತಳ್ಳಿಹಾಕಿದ್ದು ಇದೊಂದು ಪ್ರಚಾರದ ತಂತ್ರವಲ್ಲದೇ ಮತ್ತೇನೂ ಅಲ್ಲ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಮಹಾ ವಿಕಾಸ್ ಆಘಾಡಿ ಈ ರೀತಿಯ ಆರೋಪ ಮಾಡುತ್ತಿದೆ ಎಂದು ಹೇಳಿದ್ದಾರೆ.

ನಾಳೆ(ನ.20) ಬುಧವಾರ ಮಹಾರಾಷ್ಟ್ರ ವಿಧಾನಸಭೆಯ 228 ಕ್ಷೇತ್ರಗಳ ಚುನಾವಣೆ ನಡೆಯಲಿದ್ದು ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next