Advertisement

ಕಲಬುರಗಿ; ತಲ್ವಾರ್‌ನಿಂದ ಬರ್ತ್ ಡೇ ಕೇಕ್ ಕತ್ತರಿಸಿದ ಬಿಜೆಪಿ‌ ಲೀಡರ್

10:52 AM Aug 23, 2019 | Team Udayavani |

ಕಲಬುರಗಿ: ಜೇವರ್ಗಿ ತಾಲೂಕಿನ ಬಿಜೆಪಿ ಮುಖಂಡರೊಬ್ಬರು ತನ್ನ ಹುಟ್ಟುಹಬ್ಬದ ಆಚರಣೆ ಸಂದರ್ಭದಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.

Advertisement

ಎರಡು ದಿನಗಳ ಹಿಂದೆ ಜೇವರ್ಗಿ ಪಟ್ಟಣದಲ್ಲಿ ಬಿಜೆಪಿ ಮುಖಂಡ ಶರಣು ಕೋಳಕುರ ತನ್ನ ಅಭಿಮಾನಿಗಳ ಜತೆಗೆ ಹುಟ್ಟಹಬ್ಬ ಆಚರಿಸಿಕೊಂಡಿದ್ದು, ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ಹುಟ್ಟುಹಬ್ಬ ಸಮಾರಂಭಕ್ಕೆ ಆಗಮಿಸಿದ್ದ ಬೆಂಬಲಿಗರು ಸಹ ತಲ್ವಾರ್ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚರ್ಚೆಯನ್ನು ಹುಟ್ಟು ಹಾಕಿವೆ.

Advertisement

Udayavani is now on Telegram. Click here to join our channel and stay updated with the latest news.

Next