Advertisement
ಮೃತರು ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅ. 26ರಂದು ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಮಂಗಳೂರು ರಸ್ತೆಯಲ್ಲಿ ಕಾಪುವಿಗೆ ಆಗಮಿಸುತ್ತಿದ್ದ ಗೋಪ ಪೂಜಾರಿ ಅವರ ಸ್ಕೂಟಿಗೆ ಕಟಪಾಡಿ ಮೂಡುಬೆಟ್ಟು ಬಳಿ ಅದೇ ದಿಕ್ಕಿನಲ್ಲಿ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.
Related Articles
Advertisement
ಅವರು ಕಾಪು ವಿಧಾನಸಭಾ ಕ್ಷೇತ್ರ ಬಿಜೆಪಿ ಸಹಕಾರಿ ಪ್ರಕೋಷ್ಟದ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದು, ಬಿಜೆಪಿ ಕಾಪು ಶಕ್ತಿ ಕೇಂದ್ರದ ಪ್ರಮುಖ್ ಆಗಿದ್ದರು. ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಅವರು ಅನೇಕ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ, ಸಾಮಾಜಿಕ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದರು.
ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿ.ಪ. ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕ್ಷೇತ್ರಾಧ್ಯಕ್ಷ ಶ್ರೀಕಾಂತ್ ನಾಯಕ್ ಹಾಗೂ ಪಕ್ಷದ ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಂತಾಪ ಸೂಚಿಸಿದ್ದಾರೆ.