Advertisement

ಕಾಂಗ್ರೆಸ್ಸಿಗರು ಕೂಸು ಹುಟ್ಟುವ ಮುನ್ನವೇ ಕುಲಾಯಿ ಹೊಲಿಸುತ್ತಿದ್ದಾರೆ : ಕಟೀಲ್

05:11 PM Jun 23, 2021 | Team Udayavani |

ಕೊಪ್ಪಳ: ಕಾಂಗ್ರೆಸ್ ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲಿಸಿದಂತೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಬಣದ ನಡುವೆ ಸಿಎಂ ಖುರ್ಚಿಗಾಗಿ ಹಗ್ಗಜಗ್ಗಾಟ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

Advertisement

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ  ಮಾತನಾಡಿ, ಕಾಂಗ್ರೆಸ್ ನಲ್ಲಿ ವಲಸಿಗ, ಮೂಲ ಕಾಂಗ್ರೆಸ್ಸಿಗರೆಂಬ ಗೊಂದಲ ಆರಂಭವಾಗಿದೆ. ಸಿದ್ದರಾಮಯ್ಯರನ್ನು ಮೂಲ ಕಾಂಗ್ರೆಸ್ಸಿಗರು ಒಪ್ಪುತ್ತಿಲ್ಲ. ಹೀಗಾಗಿ ಮ್ಯೂಸಿಕಲ್ ಚೇರ್ ಆಟ ಆರಂಭವಾಗಿದೆ. ಸಿಎಂ ಸ್ಥಾನಕ್ಕಾಗಿ ಈಗಿನಿಂದಲೇ ಟವೆಲ್ ಹಾಕುತ್ತಿದ್ದಾರೆ. ಇನ್ನು ಮದುವೆಯೇ ಆಗಿಲ್ಲ. ಈಗಲೇ ಮಗುವಿಗೆ ಕುಲಾಯಿ ಹೊಲಿಸುವ ಕೆಲಸ ಮಾಡುತ್ತಿದ್ದಾರೆಂದು ವ್ಯಂಗ್ಯವಾಡಿದರು.

ರಮೇಶ ಜಾರಕಿಹೊಳಿ ರಾಜೀನಾಮೆ ನೀಡುವ ಬಗ್ಗೆ ನನ್ನೊಂದಿಗೆ ಮಾತನಾಡಿಲ್ಲ. ಅವರ ಸಮಸ್ಯೆಗಳೇನಿದ್ದರೂ ಪರಿಹರಿಸಲಾಗುವುದು. ಸಣ್ಣಪುಟ್ಟ ಗೊಂದಲ‌ ಇದ್ದವು. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಂದು ಪರಿಹರಿಸಿದ್ದಾರೆ. ಸದ್ಯಕ್ಕೆ ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿಲ್ಲ. ಇದ್ದಲ್ಲಿ ಪರಪಸ್ಪರ ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದರು.

ಇನ್ನು ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷದ ಸ್ವಂತ ಕಟ್ಟಡ ಕಾಮಗಾರಿ ನಡೆದಿವೆ. ಸದ್ಯ 9 ಜಿಲ್ಲೆಯಲ್ಲಿ ಸ್ವಂತ ಕಚೇರಿಗಳಿವೆ. 11 ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ನಡೆದಿದೆ. ಹೀಗಾಗಿ ಎಲ್ಲ ಜಿಲ್ಲೆಗೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸುತ್ತಿರುವೆ. ಕೊಪ್ಪಳ ಜಿಲ್ಲಾ ಕಚೇರಿ ಕಾಮಗಾರಿ ಬಹುಪಾಲು ಪೂರ್ಣಗೊಂಡಿದೆ. ದೀಪಾವಳಿ ಒಳಗೆ ಕಚೇರಿ ಉದ್ಘಾಟನೆ ಮಾಡಲಾಗುವುದು. ಇದರೊಂದಿಗೆ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಟೀಲ್ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next