ಬೆಂಗಳೂರು:ಅತ್ಯಾಚಾರ ಆರೋಪ ಪ್ರಕರಣದಲ್ಲಿ ಎಸ್‌ಐಟಿ ಕ್ಲೀನ್‌ಚಿಟ್ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟಕ್ಕೆ ಮರು ಸೇರ್ಪಡೆಗೆ ರಮೇಶ್ ಜಾರಕಿಹೊಳಿ ಒತ್ತಡ ಹೇರಲು ಆರಂಭಿಸಿದ್ದಾರೆ.
ಗೋವಾದಲ್ಲಿ ದೇವೇಂದ್ರ ಫಡ್ನವಿಸ್ ಅವರನ್ನು ಭೇಟಿ ಮಾಡಿ ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಬಳಿ ಮಾತನಾಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಜತೆಗೆ, ಇತ್ತೀಚೆಗೆ ಮುಖ್ಯಮಂತ್ರಿ ಭೇಟಿ ಸಂದರ್ಭದಲ್ಲೂ ಪ್ರಸ್ತಾಪಿಸಿದ್ದರು ಎಂದು ಹೇಳಲಾಗಿದೆ.
ವರಿಷ್ಠರಿಂದ ಗ್ರೀನ್ ಸಿಗ್ನಲ್ ದೊರೆತ ನಂತರವೇ ಸಂಪುಟ ಸೇರಲು ಸಾಧ್ಯ ಎಂಬ ಕಾರಣಕ್ಕೆ ಫಡ್ನವಿಸ್ ಮೂಲಕ ಒತ್ತಡ ಹಾಕಿಸಿದ್ದಾರೆ. ಜತೆಗೆ, ಸಂಪುಟದಲ್ಲಿ ರುವ ವಲಸಿಗ ಸಚಿವರೂ ಇದೀಗ ರಮೇಶ್ ಪರ ನಿಂತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸರಿಪಡಿಸಲು ಹಿಜಾಬ್ ಹುಟ್ಟಿಕೊಂಡಿದೆ: ರೆಡ್ಡಿ
ಈ ಮಧ್ಯೆ, ರಮೇಶ್ ಜಾರಕಿಹೊಳಿ ಜತೆಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ, ಕಟೀಲ್ ಅವರಿಗೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಡ ಹೇರಿದ್ದಾರೆ ಎಂದು ಹೇಳಲಾಗಿದೆ.