ಲಕ್ನೋ: ಭಾರತೀಯ ಜನತಾ ಪಕ್ಷದ ಮುಖಂಡರೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಉತ್ತರಪ್ರದೇಶದ ಚಂದಾಪುರ್ ಪ್ರದೇಶದಲ್ಲಿ ಸೋಮವಾರ(ಏಪ್ರಿಲ್ 12) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮೋದಿಯೇ ಸ್ಪೂರ್ತಿಯಂತೆ : ಚುನಾವಣೆಗೆ ಸ್ಪರ್ಧಿಸಿದ ‘ಚಹಾವಾಲಿ’!
ಮುಂಬರುವ ಪಂಚಾಯತ್ ಚುನಾವಣೆಗಾಗಿ ಅಭ್ಯರ್ಥಿಗಳ ಪರ ಪ್ರಚಾರ ಕಾರ್ಯ ನಡೆಸಿ ಭಾನುವಾರ ರಾತ್ರಿ ಮನೆಗೆ ಮರಳುತ್ತಿದ್ದ ಬಿಜೆಪಿ ಮುಖಂಡ ನೀರಜ್ ಪಾಂಡೆ ಮೇಲೆ ಗುಂಡಿನ ದಾಳಿ ನಡೆದಿರುವುದಾಗಿ ವರದಿ ತಿಳಿಸಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ವರ್ಮಾ ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಪಾಂಡೆ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ನಂತರ ಕಾನ್ಪುರ್ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯಾಧಿಕಾರಿಗಳು ಶಿಫಾರಸು ಮಾಡಿದ್ದರು. ಉತ್ತರಪ್ರದೇಶದಲ್ಲಿ ಏಪ್ರಿಲ್ 15ರಿಂದ ನಾಲ್ಕು ಹಂತಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದೆ ಎಂದು ವರದಿ ತಿಳಿಸಿದೆ.