Advertisement

Vantamuri Incident: ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ; ಸಿದ್ದರಾಮಯ್ಯ

11:55 AM Dec 17, 2023 | Team Udayavani |

ಹುಬ್ಬಳ್ಳಿ: ವಂಟಮುರಿ ಗ್ರಾಮದ ಘಟನೆಯಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸರಕಾರವು ಎಲ್ಲಾ ಕಾನೂನು ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಇಲ್ಲಿನ ಬದಾಮಿ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಡರ ನಿವಾಸದಲ್ಲಿ ಉಪಹಾರ ಮುಗಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಗೊತ್ತಾದ ತಕ್ಷಣ ಗೃಹ ಸಚಿವರು ಮಹಿಳೆ ಭೇಟಿ ಮಾಡಿದ ಸಾಂತ್ವನ ಹೇಳಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದೆ. ಸರ್ಕಾರ ಎಲ್ಲಿ ಫೇಲ್ ಆಗಿದೆ ಎಂದು ನನಗೆ ಗೊತ್ತಾಗಬೇಕು. ಅವರು ರಾಜಕೀಯ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಉತ್ತರ ಪ್ರದೇಶದಲ್ಲಿ ಬಿಜೆಪಿ ಶಾಸಕ ಶಾಸಕ 9 ವರ್ಷ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಜೈಲು ಸೇರಿದ್ದಾನೆ. ಇದಕ್ಕೆ ಜೆಪಿ ನಡ್ಡಾ ಮತ್ತು ಬಿಜೆಪಿ ನಾಯಕರು ಏನು ಹೇಳತ್ತಾರೆ. ಇಂತಹ ಎಂಎಲ್ಎ ಇಟ್ಟುಕೊಂಡವರು, ಹೆಣ್ಣುಮಕ್ಕಳು ಮೇಲೆ ದೌರ್ಜನ್ಯ ಮಾಡುವವರಿಗೆ ನಮ್ಮ ಬಗ್ಗೆ ಮಾತನಾಡಲು ಏನು ನೈತಿಕತೆಯಿದೆ ವಾಗ್ದಾಳಿ ನಡೆಸಿದರು.

ನಮ್ಮ ಅವಧಿಯಲ್ಲಿ ಕ್ರೈಂ ಗಳು ಹೆಚ್ಚಾಗಿವಿಯೋ ಅಥವಾ ಅವರ ಅವಧಿಯಲ್ಲಿ ಆಗುತ್ತಿವೆಯೋ ಎಂಬುವುದನ್ನು ನ್ಯಾಷನಲ್ ಕ್ರೈಂ ಬ್ಯೂರೋ ಅವರ ವರದಿ ನೋಡಲಿ. ಯಾರ ಮೇಲೆ ದೌರ್ಜನ್ಯ ಆದರೂ ಅವರ ಮೇಲೆ ನಾವು ಕಠಿಣ ಕ್ರಮ ತೆಗೆದುಕೊಳ್ಳತ್ತೆವೆ. ಇದು ಅನಾಗರಿಕ ಘಟನೆ ಇದು ನಾಗರಿಕ ಸಮಾಜದಲ್ಲಿ ನಡೆಯಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next