Advertisement

 ಬೇಳೂರು ವಿರುದ್ಧ ಪೊಲೀಸ್‌ ಆಯುಕ್ತರಿಗೆ ಬಿಜೆಪಿ ನಾಯಕರ ದೂರು

12:30 AM Mar 06, 2019 | |

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್‌ ಮುಖಂಡ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ನಾಯಕರು ಟ್ವೀಟರ್‌ನಲ್ಲಿ ತೀವ್ರವಾಗಿ ಖಂಡಿಸಿ ಅವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Advertisement

ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು, ನಮ್ಮ ಗಾಂಧೀಜಿಯನ್ನು ಕೊಲೆ ಮಾಡಿದಂತಹ ನಾಥೂರಾಮ್‌ ಗೋಡ್ಸೆ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ. ಅಂಥವರು ಈ ದೇಶದಲ್ಲೇ ಇರಬಾರದು. ಅವರೇನಾದರೂ ಈ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಲು ಹೊರಟರೆ, ಬಹುಶಃ ನಿಮಗೆ ತಾಕತ್ತಿದ್ದರೆ ನಿಮ್ಮ ಮೋದಿಯ ವರನ್ನು ಗುಂಡು ಇಟ್ಟು ಸಾಯಿಸಿರಿ. ಈ ದೇಶದಲ್ಲಿ ಇನ್ಯಾರನ್ನೂ ಸಾಯಿಸಲು ಹೋಗಬೇಡಿ’ ಎಂದು ಹೇಳಿರುವ ವಿಡಿಯೋ ಶೇರ್‌ ಮಾಡಿರುವ ಬಿಜೆಪಿ ಕರ್ನಾಟಕ ತೀವ್ರವಾಗಿ ಖಂಡಿಸಿದೆ. ಬೇಳೂರು ಗೋಪಾಲಕೃಷ್ಣ ಅವರು ಪಕ್ಷದ ಅಧಿಕೃತ ಕಾರ್ಯಕ್ರಮದಲ್ಲಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಪ್ರಧಾನಿ ಮೋದಿಯವರನ್ನು ಹತ್ಯೆ ಮಾಡುವಂತೆ ಕರೆ ನೀಡುತ್ತಾರೆ. ಪ್ರಧಾನಿಯವರ ಹತ್ಯೆಗೆ ಪ್ರಚೋದಿಸುವುದು ರಾಷ್ಟ್ರದ ಭದ್ರತೆಗೆ ಬೆದರಿಕೆಯೊಡ್ಡಿದಂತಿದ್ದು, ಕೂಡಲೇ ಕೇಂದ್ರ ಗೃಹ ಸಚಿವಾಲಯ ಹಾಗೂ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಕರ್ನಾಟಕ ಟ್ವಿಟರ್‌ನಲ್ಲಿ ಆಗ್ರಹಿಸಿದೆ.

ಕ್ರಮ ಜರುಗಿಸಬೇಕು: ಸಂಸದೆ ಶೋಭಾ ಕರಂದ್ಲಾಜೆ ಅವರು, ಬೇಳೂರು ಗೋಪಾಲಕೃಷ್ಣ ಅವರು ಪ್ರಧಾನಿ ಮೋದಿಯವರ ಹತ್ಯೆಗೆ ಕರೆ ನೀಡಿರುವ ಹೇಳಿಕೆ ನೋಡಿ ಆಘಾತವಾಯಿತು. ನಿರ್ದಿಷ್ಟ ವರ್ಗದವರನ್ನು ತೃಪ್ತಿಪಡಿಸಲು ಕಾಂಗ್ರೆಸ್‌, ಚುನಾಯಿತ ಪ್ರಧಾನಿಯವರ ಹತ್ಯೆಗೆ ಪ್ರಚೋದನೆ ನೀಡುತ್ತಿದೆ. ಡಾ.ಜಿ.ಪರಮೇಶ್ವರ್‌ ಹಾಗೂ ಎಚ್‌.ಡಿ.ಕುಮಾರಸ್ವಾಮಿ ಯವರು ಕಾನೂನಿನ ಪ್ರಕಾರ ಕ್ರಮ ಜರುಗಿಸಬೇಕು ಎಂದು ಟ್ವೀಟ್‌ನಲ್ಲಿ ಒತ್ತಾಯಿಸಿದ್ದಾರೆ.

ತನಿಖೆಗೆ ವಹಿಸುವಂತೆ ಆಗ್ರಹ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶಾಸಕ ಸಿ.ಟಿ. ರವಿ, ಹತಾಶೆಗೊಂಡಿರುವ ಕಾಂಗ್ರೆಸ್‌ ನಾಯಕರು ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ. ಅವರು ಪ್ರಧಾನಿ ಮೋದಿಯವರನ್ನು ಜನರೇ ಹತ್ಯೆ ಮಾಡಬೇಕೆಂದು ಬಯಸುತ್ತಾರೆ. ರಾಹುಲ್‌ ಗಾಂಧಿಯವರೇ ಇದೇನು ಪ್ರಜಾಪ್ರಭುತ್ವವೇ? ಬೆಂಗಳೂರು ಪೊಲೀಸ್‌ ಆಯುಕ್ತರು ಕೂಡಲೇ ಗೋಪಾಲಕೃಷ್ಣ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಟ್ವೀಟ್‌ನಲ್ಲಿ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗೆ ಪತ್ರ
ಪ್ರಧಾನಿ ಮೋದಿಯವರನ್ನು ಹತ್ಯೆ ಮಾಡುವಂತೆ ಬೇಳೂರು ಗೋಪಾಲಕೃಷ್ಣ ನೀಡಿರುವ ಹೇಳಿಕೆಗೆ ಆಘಾತ ವ್ಯಕ್ತಪಡಿಸಿರುವ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಲೆಹರ್‌ ಸಿಂಗ್‌, ಕೂಡಲೇ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮುಖ್ಯಮಂತ್ರಿಗೆ ಮಂಗಳವಾರ ಪತ್ರ ಬರೆದಿದ್ದಾರೆ. ಈ ಹೇಳಿಕೆಯನ್ನು ಲಘುವಾಗಿ ಪರಿಗಣಿಸಬಾರದು. ಮುಖ್ಯಮಂತ್ರಿಗಳು ಸ್ವಯಂಪ್ರೇರಿತವಾಗಿ ತಕ್ಷಣವೇ ಬೇಳೂರು ಗೋಪಾಲಕೃಷ್ಣ ಅವರನ್ನು ವಿಚಾರಣೆ ನಡೆಸಿ ತನಿಖೆಗೊಳಪಡಿಸುವಂತೆ ಸೂಚಿಸಬೇಕು. ಪ್ರಧಾನಿಯವರು ಬುಧವಾರ ಕಲಬುರಗಿಗೆ ಭೇಟಿ ನೀಡುತ್ತಿದ್ದು, ಕಾಂಗ್ರೆಸ್‌ನ ನಾಯಕರ ಅಪಾಯಕಾರಿ ಹೇಳಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಇನ್ನಷ್ಟು ಬಿಗಿ ಭದ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Advertisement

ದೂರು ಸಲ್ಲಿಕೆ ಇಂದು
ಪ್ರಧಾನಿ ವಿರುದಟಛಿ ಪ್ರಚೋದನಕಾರಿ ಭಾಷಣ ಮಾಡಿರುವ ಬೇಳೂರು ಗೋಪಾಲಕೃಷ್ಣ ವಿರುದ್ಧ
ಬಿಜೆಪಿ ಮುಖಂಡರ ನಿಯೋಗ ಬುಧವಾರ ಬೆಳಗ್ಗೆ 11.30ಕ್ಕೆ ನಗರ ಪೊಲೀಸ್‌ ಆಯುಕ್ತರಿಗೆ ದೂರು ಸಲ್ಲಿಸಲಿದೆ.

Advertisement

Udayavani is now on Telegram. Click here to join our channel and stay updated with the latest news.

Next