Advertisement
ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ನಾಯಕರು ಶನಿವಾರ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡರು.
Related Articles
Advertisement
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜೋಧ್‌ಪುರದಲ್ಲಿ ತಿರಂಗಾ ರ‍್ಯಾಲಿಯಲ್ಲಿ ಭಾಗವಹಿಸಿ ಮೊಘಲರ ವಿರುದ್ಧದ ಹೋರಾಟವನ್ನು ಮುನ್ನಡೆಸಿದ ಯೋಧ ದುರ್ಗಾದಾಸ್ ರಾಥೋಡ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಮೀರತ್‌ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು “ಹರ್ ಘರ್ ತಿರಂಗಾ ಯಾತ್ರೆ”ಗೆ ಧ್ವಜಾರೋಹಣ ಮಾಡಲಿದ್ದಾರೆ ಎಂದು ಪಕ್ಷ ತಿಳಿಸಿದೆ.
ಇದನ್ನೂ ಓದಿ:ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ
ಹರ್ ಘರ್ ತಿರಂಗಾ ಅಭಿಯಾನದ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ತಿರಂಗಾ ನಮ್ಮ ಹೆಮ್ಮೆ. ಇದು ಪ್ರತಿಯೊಬ್ಬ ಭಾರತೀಯರನ್ನು ಒಂದುಗೂಡಿಸುತ್ತದೆ ಮತ್ತು ಪ್ರೇರೇಪಿಸುತ್ತದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾದ ಘೋಷಣೆಯ ಮೇರೆಗೆ, ಇಂದು ದೆಹಲಿಯ ನನ್ನ ನಿವಾಸದಲ್ಲಿ ತಿರಂಗಾವನ್ನು ಹಾರಿಸಿ, ಮಾತೃಭೂಮಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ನಮ್ಮ ವೀರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು .
ಮಾತ್ರವಲ್ಲದೇ ಆಗಸ್ಟ್ 13-15 ರವರೆಗೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮತ್ತು “ಪ್ರತಿಯೊಂದು ಹೃದಯದಲ್ಲಿ ದೇಶಪ್ರೇಮದ ಚೈತನ್ಯವನ್ನು ಜಾಗೃತಗೊಳಿಸುವ ಈ ಅಭಿಯಾನದ ಭಾಗವಾಗಲು” ಜನರಲ್ಲಿ ಮನವಿ ಮಾಡಿದರು.