Advertisement

ಬಿಜೆಪಿ ನಾಯಕರಿಂದ ದೇಶಾದ್ಯಂತ ‘ಹರ್ ಘರ್ ತಿರಂಗಾ ‘ಅಭಿಯಾನ

06:24 PM Aug 13, 2022 | Team Udayavani |

ನವದೆಹಲಿ: ದೇಶಕ್ಕೆ ಸ್ವಾತಂತ್ರ್ಯ ಬಂದು 75ನೇ ವರ್ಷ ಆಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ನಡೆಯಲಿದೆ.

Advertisement

ಕೇಂದ್ರ ಸಚಿವರು ಸೇರಿದಂತೆ ಬಿಜೆಪಿ ನಾಯಕರು ಶನಿವಾರ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನದಲ್ಲಿ ಪಾಲ್ಗೊಂಡರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪತ್ನಿಯೊಂದಿಗೆ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು.

ಪಕ್ಷದ ಮುಖಂಡರು ವಿವಿಧ ಸ್ಥಳಗಳಲ್ಲಿ ಪ್ರಭಾತ್ ಫೇರಿ ಮತ್ತು ತಿರಂಗಾ ರ‍್ಯಾಲಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು .

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹಿಮಾಚಲ ಪ್ರದೇಶದ ಉನಾದಲ್ಲಿ ನಡೆದ ಪ್ರಭಾತ್ ಪೇರಿಯಲ್ಲಿ ಭಾಗವಹಿಸಿದ್ದರು.

Advertisement

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜೋಧ್‌ಪುರದಲ್ಲಿ ತಿರಂಗಾ ರ‍್ಯಾಲಿಯಲ್ಲಿ ಭಾಗವಹಿಸಿ ಮೊಘಲರ ವಿರುದ್ಧದ ಹೋರಾಟವನ್ನು ಮುನ್ನಡೆಸಿದ ಯೋಧ ದುರ್ಗಾದಾಸ್ ರಾಥೋಡ್ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಮೀರತ್‌ನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು “ಹರ್ ಘರ್ ತಿರಂಗಾ ಯಾತ್ರೆ”ಗೆ ಧ್ವಜಾರೋಹಣ ಮಾಡಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ಇದನ್ನೂ ಓದಿ:ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವೆ ಸಾಮರಸ್ಯ ಬೆಳೆಯಬೇಕು: ಸಿಎಂ ಬೊಮ್ಮಾಯಿ

ಹರ್ ಘರ್ ತಿರಂಗಾ ಅಭಿಯಾನದ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ತಿರಂಗಾ ನಮ್ಮ ಹೆಮ್ಮೆ. ಇದು ಪ್ರತಿಯೊಬ್ಬ ಭಾರತೀಯರನ್ನು ಒಂದುಗೂಡಿಸುತ್ತದೆ ಮತ್ತು ಪ್ರೇರೇಪಿಸುತ್ತದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾದ ಘೋಷಣೆಯ ಮೇರೆಗೆ, ಇಂದು ದೆಹಲಿಯ ನನ್ನ ನಿವಾಸದಲ್ಲಿ ತಿರಂಗಾವನ್ನು ಹಾರಿಸಿ, ಮಾತೃಭೂಮಿಗಾಗಿ ಎಲ್ಲವನ್ನೂ ತ್ಯಾಗ ಮಾಡಿದ ನಮ್ಮ ವೀರರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು .

ಮಾತ್ರವಲ್ಲದೇ ಆಗಸ್ಟ್ 13-15 ರವರೆಗೆ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಮತ್ತು “ಪ್ರತಿಯೊಂದು ಹೃದಯದಲ್ಲಿ ದೇಶಪ್ರೇಮದ ಚೈತನ್ಯವನ್ನು ಜಾಗೃತಗೊಳಿಸುವ ಈ ಅಭಿಯಾನದ ಭಾಗವಾಗಲು” ಜನರಲ್ಲಿ ಮನವಿ ಮಾಡಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next