Advertisement
ತಾಲೂಕಿನ ನೂಲ್ವಿ ಕ್ರಾಸ್ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಬಂದ ಸಂದರ್ಭದಲ್ಲಿ ಆ ಪಕ್ಷದ ನಾಯಕರನ್ನು ನಿರ್ಲಕ್ಷ್ಯ ಮಾಡಿದರೆ ತಿನ್ನಬಾರದ ಪೆಟ್ಟು ತಿನ್ನುತ್ತಾರೆ ಎಂದರು.
Related Articles
Advertisement
ಬಿಜೆಪಿಯು ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಚುನಾವಣೆ ಒಂದೇ ಮಾಡಿದರು. ಕಾಂಗ್ರೆಸ್ ನವರು ಜಗದೀಶ ಶೆಟ್ಟರ, ಸವದಿಯನ್ನು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದು ಸ್ವಾಮೀಜಿ ಸಲಹೆ ನೀಡಿದರು.
ಬ್ರಾಹ್ಮಣ ವಿಚಾರವಾಗಿ ನಾನು ಆರು ತಿಂಗಳ ನಂತರ ಸುದ್ದಿಗೋಷ್ಠಿ ಮಾಡುತ್ತೇನೆ. ರಾಜ್ಯದಲ್ಲಿ ಏನಾಗಿದೆ ಅನ್ನುವ ದಾಖಲೆ ಇವೆ. ಬ್ರಾಹ್ಮಣರ ಬಗ್ಗೆ ಮಾತನಾಡುವುದಕ್ಕೆ ನನಗೆ ಭಯವಿಲ್ಲ. ಯಾರ ಅಂಕುಶವೂ ನನಗಿಲ್ಲ. ಬಹಳ ಮಾತನಾಡಿ ಉಪಯೋಗವಿಲ್ಲ ಎಂದರು.
ಬಿಜೆಪಿಯವರು ರಾಜ್ಯದ ನಾಯಕರನ್ನು ಬಹಳ ಕೆಟ್ಟ ರೀತಿಯಲ್ಲಿ ನೋಡಿಕೊಂಡರು. ಅವರದು ಅವರೇ ಉಂಡರು. ದಕ್ಷಿಣ ಭಾರತದ ಕುದುರೆಗಳನ್ನು ಕತ್ತೆ ಅಂದುಕೊಂಡಿದ್ದೇ ಇದಕ್ಕೆಲ್ಲ ಕಾರಣ. ಕರ್ನಾಟಕದ ನಾಯಕರನ್ನು ಬಿಟ್ಡು ಏನಾದರೂ ಮಾಡುತ್ತೀವಿ ಅಂದುಕೊಂಡಿದ್ದರು. ರಾಜ್ಯದ ಮತದಾರರು ಬುದ್ಧಿಗೇಡಿಗಳಾ, ರಾಷ್ಟ್ರ ನಾಯಕರಿಗೆ ಸರಿಯಾದ ಪಾಠ ಕಲಿಸಿದ್ದಾರೆ ಎಂದರು.
ರಾಜ್ಯವನ್ನು ಸರಿಯಾದ ರೀತಿ ನಡೆಸುವ ಸಮರ್ಥ, ಯೋಗ್ಯ ಹಾಗೂ ಕರ್ನಾಟಕ ಒಂದು ದೃಷ್ಟಿಕೋನದಲ್ಲಿ ನೋಡುವ ವ್ಯಕ್ತಿ ಸಿಎಂ ಆಗಬೇಕು. ಉತ್ತರ ಕರ್ನಾಟಕದ ಲಿಂಗಾಯತ ನಾಯಕರಲ್ಲಿ ಸಾಕಷ್ಟು ಬುದ್ಧಿಜೀವಿಗಳು ಇದ್ದಾರೆ. ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು. ಇದು ನಮ್ಮಅಭಿಪ್ರಾಯ ಎಂದು ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.