Advertisement

ಬಿಜೆಪಿ ನಾಯಕರ ಕೈವಾಡ ಇರಬಹುದು: ದಿನೇಶ್‌

06:35 AM Jan 09, 2018 | Team Udayavani |

ಬೆಂಗಳೂರು: ದೀಪಕ್‌ ರಾವ್‌ ಕೊಲೆಯ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ ಎಂದು ಹೇಳಿರುವ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಯನ್ನು ಸಮರ್ಥಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌, ಬಿಜೆಪಿ ನಾಯಕರ ಕೈವಾಡ ಇರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. 

Advertisement

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಹಿತಿ ಇಲ್ಲದೇ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆ ಹಿಂದೆ ಸಂಘ ಪರಿವಾರದ ಕೈವಾಡ ಇದೆ ಎಂದು ಆರೋಪಿಸಿರುವ ದಿನೇಶ್‌, ಹರೀಶ್‌ ಪೂಜಾರಿ ಕೊಲೆ ಹಿಂದೆ ಸಂಘ ಪರಿವಾರದವರಿದ್ದರು. ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್‌ ಆತ್ಮಹತ್ಯೆ ಪ್ರಕರಣದಲ್ಲಿ ಬಜರಂಗದಳದ ಸದಸ್ಯ ಮೊದಲ ಆರೋಪಿಯಾಗಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next