ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸೂಕ್ತ ಮಾಹಿತಿ ಒದಗಿಸಲು ಭಾನುವಾರ ಸಂಜೆ ಬಿಜೆಪಿ
ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದಲ್ಲಿ ಮುಖಂಡರು ಸುದೀರ್ಘ ಸಭೆ ನಡೆಸಿದ್ದಾರೆ.
Advertisement
ಪರಿವರ್ತನಾ ಯಾತ್ರೆಯ ಸಮಾವೇಶದ ನಂತರ ನಗರದ ಡಾಲರ್ ಕಾಲೋನಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾಉಸ್ತುವಾರಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿ ಸಭೆ ನಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗೆ ಬೇಕಾದ ಕಾರ್ಯತಂತ್ರ ರೂಪಿಸಲು ರಾಜ್ಯ ವಿಧಾನಸಭಾ ಕ್ಷೇತ್ರವಾರು ಮಾಹಿತಿ, ವಿದ್ಯಮಾನ ಸೇರಿದಂತೆ ಪ್ರಮುಖಾಂಶಗಳನ್ನು ನೀಡುವಂತೆ ಅಮಿತ್ ಶಾ ಇತ್ತೀಚಿಗೆ ನಡೆದ ರಾಜ್ಯ ಮುಖಂಡರ ಸಭೆಯಲ್ಲಿ ಸೂಚಿಸಿದ್ದರು. ಜ.10ರಂದು ಅಮಿತ್ ಶಾ ಚಿತ್ರದುರ್ಗಕ್ಕೆ ಬರಲಿದ್ದು, ಅಷ್ಟರೊಳಗೆ ಎಲ್ಲಾ ಮಾಹಿತಿ ಕ್ರೋಢೀಕರಿಸುವ ಪ್ರಯತ್ನ ನಡೆಸುತ್ತಿದ್ದಾರೆ.ಜತೆಗೆ ಕೋರ್‌ಕಮಿಟಿ ಸಭೆಯ ವಿಷಯದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಉದ್ಯಮಿ ಹಾಗೂ ಕಾಫಿ ಡೇ ಮಾಲೀಕ ಸಿದ್ದಾರ್ಥ್ ಅವರ ಸಂಸ್ಥೆ ಮತ್ತು ಮನೆ ಮೇಲೆ ಐಟಿ ದಾಳಿಯ
ನಂತರ ಬಿಜೆಪಿಯಿಂದ ಸ್ವಲ್ಪ ದೂರ ಉಳಿದಿದ್ದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭಾನುವಾರ
ಸಂಜೆ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಸುಮಾರು 40 ನಿಮಿಷಗಳ ಕಾಲ ಮಾತನಾಡಿದ್ದಾರೆ. ಸದಾಶಿವನಗರದಲ್ಲಿರುವ ಎಸ್.ಎಂ.ಕೃಷ್ಣ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಸಚಿವ ಪ್ರಕಾಶ್ ಜಾವಡೇಕರ್ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಜ.28ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪರಿವರ್ತನಾ ಸಮಾವೇಶದ ಸಮಾರೋಪಕ್ಕೆ ಆಹ್ವಾನಿಸಿದ್ದಾರೆ. ಜತೆಗೆ ಪ್ರಧಾನಿ ಮೋದಿಯವರು ಬರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.