Advertisement

ಎಸ್‌.ಎಂ.ಕೃಷ್ಣ ಭೇಟಿ ಮಾಡಿದ ಬಿಜೆಪಿ ನಾಯಕರು

07:00 AM Apr 14, 2018 | Team Udayavani |

ಬೆಂಗಳೂರು: ಪಕ್ಷದಲ್ಲಿ ಸೂಕ್ತ ಪ್ರಾತಿನಿಧ್ಯ ದೊರೆಯುತ್ತಿಲ್ಲ ಎಂದು ಬೇಸರಗೊಂಡಿದ್ದಾರೆ ಎಂದು ಹೇಳಲಾದ ಹಿರಿಯ ನಾಯಕ ಎಸ್‌.ಎಂ.ಕಷ್ಣ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡಿ ಚರ್ಚಿಸಿದರು.

Advertisement

ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್‌ ಜಾವಡೇಕರ್‌, ಚುನಾವಣಾ ಉಸ್ತುವಾರಿ ಮುರಳೀಧರ್‌ರಾವ್‌, ಕೇಂದ್ರ ಸಚಿವ ಅನಂತಕುಮಾರ್‌ ಅವರು ಕೃಷ್ಣ ಅವರ ಸದಾಶಿವನಗರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು. 

ಪಕ್ಷದ ಪರ ಪ್ರಚಾರಕ್ಕೆ ಆಗಮಿಸುವಂತೆ ಮನವಿ ಮಾಡಿದ ಅವರು,ಚುನಾವಣೆಯಲ್ಲಿ ಕುಟುಂಬದ ಸದಸ್ಯರು ಸ್ಪರ್ಧೆ ಮಾಡುವುದಾದರೆ ಟಿಕೆಟ್‌ ನೀಡಲು ಅಭ್ಯಂತರವಿಲ್ಲವೆಂದು ಹೇಳಿದರು. ಆರೋಗ್ಯ ಸಹಕರಿಸಿದರೆ ಮೈಸೂರು ಭಾಗದಲ್ಲಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಪ್ರಚಾರ ಸಮಾವೇಶಕ್ಕೆ ಬರುವುದಾಗಿ ಹೇಳಿದ ಕೃಷ್ಣ, ಪಕ್ಷ ಬಿಡುತ್ತೇನೆಂಬ ವದಂತಿಗಳಲ್ಲಿ ಸತ್ಯಾಂಶವಿಲ್ಲ ಎಂದು ಬಿಜೆಪಿ ನಾಯಕರಿಗೆ ಸ್ಪಷ್ಟಪಡಿಸಿದರು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next