ಬೆಳಗಾವಿ: ಬಿಜೆಪಿ ನಾಯಕರಿಗೆ ಈಗ ಅವಶ್ಯಕತೆ ಹಾಗೂ ಅನಿವಾರ್ಯತೆಯಿದೆ. ಹೀಗಾಗಿ ಅವರು ನಮ್ಮನ್ನು ಪಕ್ಷಕ್ಕೆ ಮರಳಿ ಬರುವಂತೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅಥಣಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಆದರೆ ನಾನು ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಬಿಜೆಪಿಯ ಹಲವು ನಾಯಕರು ಹಾಗೂ ನನ್ನ ಆತ್ಮೀಯರು ಸಂಪರ್ಕದಲ್ಲಿದ್ದಾರೆ. ಪಕ್ಷಕ್ಕೆ ಬರುವಂತೆ ಒತ್ತಡ ಹಾಕುತ್ತಿದ್ದಾರೆ. ಆದರೆ ಅಂತಿಮವಾಗಿ ನಿರ್ಣಯ ತೆಗೆದುಕೊಳ್ಳುವವನು ನಾನು. ಈಗ ಎಲ್ಲವನ್ನೂ ಬಹಿರಂಗವಾಗಿ ಹೇಳಲು ಆಗುವದಿಲ್ಲ ಎಂದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನ್ನಿಂದ ಕೆಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಅನುಕೂಲವಾಗಿದೆ ಎಂಬುದು ಬಿಜೆಪಿಗೆ ಮನವರಿಕೆಯಾಗಿದೆ. ಹೀಗಾಗಿ ಪಕ್ಷದ ನಾಯಕರು ನನ್ನ ಸಂಪರ್ಕ ಮಾಡುತ್ತಿದ್ದಾರೆ. ಆದರೆ ನಾನು ಕಾಂಗ್ರೆಸ್ ಬಿಡುವುದಿಲ್ಲ ಎಂದು ಸವದಿ ಸ್ಪಷ್ಟವಾಗಿ ಹೇಳಿದರು.