ರಾಯಚೂರು: ಬಿಜೆಪಿ ಪಕ್ಷದ ವತಿಯಿಂದ ಜಿಲ್ಲೆಯ ಸಿರವಾರದಲ್ಲಿ ಹಮ್ಮಿಕೊಂಡ ಜನಸ್ವರಾಜ್ ಯಾತ್ರೆ ಕಾರ್ಯಕ್ರಮದ ವೇದಿಕೆ ಮೇಲೆಯೇ ಪಕ್ಷದ ಮುಖಂಡರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆಯಿತು.
ಮಾನ್ವಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಜಕ್ಕಲದಿನ್ನಿ ವಿರುದ್ಧ ಬಿಜೆಪಿ ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಅಯ್ಯಪ್ಪ ಮ್ಯಾಕಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬ್ಯಾನರ್ ನಲ್ಲಿ ಮುಖಂಡರ ಭಾವಚಿತ್ರ ಕಡೆಗಣಿಸಿರುವುದರ ಜತೆಗೆ ಇಡೀ ಕಾರ್ಯಕ್ರಮ ತಾವೆ ರೂಪಿಸಿದ್ದಾರೆ ಎಂಬ ರೀತಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಜಗಳ ಆರಂಭಿಸಿದ್ದಾರೆ. ಪಕ್ಷದ ಕಾರ್ಯಕ್ರಮವೋ ವೈಯಕ್ತಿಕ ಕಾರ್ಯಕ್ರಮವೋ ಎಂದು ಏರುದನಿಯಲ್ಲಿ ವಾಗ್ವಾದ ನಡೆಸಿ ಕೈ- ಕೈ ಮಿಲಾಯಿಸುವ ಹಂತಕ್ಕೆ ತೆರಳಿದ್ದಾರೆ.
ಇದನ್ನೂ ಓದಿ:ತಡವಾದರೂ ಐತಿಹಾಸಿಕ ನಿರ್ಧಾರ; ಪ್ರಧಾನಿಯವರನ್ನು ಅಭಿನಂದಿಸುತ್ತೇನೆ: ಯಡಿಯೂರಪ್ಪ
ಸ್ಥಳದಲ್ಲಿದ್ದ ಮಾಜಿ ಶಾಸಕ ತಿಪ್ಪರಾಜ್, ಮಾಜಿ ಜಿಲ್ಲಾಧ್ಯಕ್ಷ ಜೆ.ಶರಣಪ್ಪಗೌಡ ಸಮಾಧಾನ ಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಮಲ್ಲಿಕಾರ್ಜುನ ಜಕ್ಕಲದಿನ್ನಿ ಕಾರ್ಯಕ್ರಮದಲ್ಲಿ ಯಾರನ್ನೂ ಲೆಕ್ಕಕ್ಕೆ ತೆಗೆದುಕೊಂಡಿಲ್ಲ ಎಂದು ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗ್ಗೆಯಿಂದಲೇ ಕಾರ್ಯಕ್ರಮಕ್ಕೆ ಹಲವು ವಿಘ್ನಗಳು ಎದುರಾಗಿದ್ದು, ಮಳೆ ಕಾರಣಕ್ಕೆ ಕಾರ್ಯಕ್ರಮವನ್ನು ಬೇರೆಡೆ ಸ್ಥಳಾಂತರಿಸಲಾಗಿದೆ.