Advertisement
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ನಡೆಯುತ್ತಿರುವಾಗ ಕಾಂಗ್ರೆಸ್ ಅಭ್ಯರ್ಥಿಗಳಾದಆನೇಕಲ್ ಶಿವಣ್ಣ, ಭೀಮಣ್ಣ ನಾಯ್ಕ ಹಾಗೂ ಸ್ಥಳೀಯ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕರು ವಾಸವಿರುವ ವಸತಿ ಗೃಹಗಳ ಮೇಲೆ ದಾಳಿ
ಮಾಡಿ ಕಿರುಕುಳ ನೀಡಿದ್ದಾರೆ ಎಂದು ದೂರಿದರು. ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆಯನ್ನು ದುರುಪಯೋಗ ಪಡೆಸಿಕೊಳ್ಳುತ್ತಿದ್ದು ದೇಶದ ಇತಿಹಾಸದಲ್ಲಿಯೇ ಆದಾಯ ತೆರಿಗೆ ಇಲಾಖೆ ಈ ಮಟ್ಟದಲ್ಲಿ ದುರ್ಬಳಕೆಯಾಗಿರಲಿಲ್ಲ. ಈ ಬಗ್ಗೆ
ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಹೇಳಿದರು. ಈ ಹಿಂದೆ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ದಾಳಿ ಮಾಡಿ ಬಿಜೆಪಿ ಸೇರುವಂತೆ ಒತ್ತಡ ಹೇರಿದ್ದಾರೆ. ಈ ಹಿಂದೆ ಇಲಾಖೆಯ ವಿರುದ್ದ ಪ್ರತಿಭಟನೆ ನಡೆಸಿ ದೂರು ನೀಡಿದ್ದೆವು. ಆದರೂ, ಐಟಿ ಇಲಾಖೆ ಬಿಜೆಪಿ ಮೋರ್ಚಾದಂತೆ ಕಾರ್ಯ ನಿರ್ವಹಿಸುತ್ತಿದೆ ಎಂದು ದೂರಿದರು.