Advertisement

ಬಿಜೆಪಿ ಪಟ್ಟಿ ಇಂದು ಫೈನಲ್‌ : ಎ. ಮಂಜು ಬಿಜೆಪಿಗೆ

12:30 AM Mar 18, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಸಂಭಾವ್ಯರ ಹೆಸರುಗಳನ್ನು ರಾಜ್ಯ ಬಿಜೆಪಿ ಕೋರ್‌ ಕಮಿಟಿ ಚರ್ಚೆ ನಡೆಸಿ ಅಂತಿಮಗೊಳಿಸಿದ್ದು, ಚೆಂಡು ಈಗ ವರಿಷ್ಠರ ಅಂಗಳ ತಲುಪಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹಾಗೂ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಪರಿಶೀಲನೆ ನಡೆಸಿ ಅಂತಿಮಗೊಳಿಸಿ ಮೊದಲ ಹಂತದ 22 ಅಭ್ಯರ್ಥಿಗಳ ಪಟ್ಟಿ ಸೋಮವಾರ ಪ್ರಕಟಿಸುವ ನಿರೀಕ್ಷೆಯಿದೆ.

Advertisement

ರಾಜ್ಯ ಬಿಜೆಪಿ ಕಚೇರಿಯಲ್ಲಿ ಭಾನುವಾರ ನಡೆದ ಕೋರ್‌ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಕುರಿತು ಸುದೀರ್ಘ‌ ಚರ್ಚೆ ನಡೆಯಿತು. ಬಳಿಕ ಸಂಭಾವ್ಯರ ಪಟ್ಟಿಯೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಹಿರಿಯ ನಾಯಕರೊಂದಿಗೆ ದೆಹಲಿಗೆ ತೆರಳಿದರು. ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಪ್ರವಾಸ ನಡೆಸಿದ್ದ ಯಡಿಯೂರಪ್ಪ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯವನ್ನೂ ಸಂಗ್ರಹಿಸಿದ್ದರು. ಭಾನುವಾರ ಬೆಳಗ್ಗೆ ಬಿಜೆಪಿ ಕಚೇರಿಯಲ್ಲಿ ಆರಂಭವಾದ ಸಭೆ ಮಧ್ಯಾಹ್ನ ಮುಕ್ತಾಯವಾಯಿತು. ಬಿಜೆಪಿಯೇತರ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಗುರುತಿಸುವ ಜತೆಗೆ ಹಾಲಿ ಬಿಜೆಪಿ ಸಂಸದರಿರುವ ಕ್ಷೇತ್ರಗ ಗೆ ಸಂಬಂಧಪಟ್ಟಂತೆಯೂ ಸುದೀರ್ಘ‌ ಚರ್ಚೆ ನಡೆಯಿತು. ಪರ- ವಿರೋಧದ ಮಾತುಕತೆ ನಡುವೆಯೂ ಅಂತಿಮವಾಗಿ ಸಂಭಾವ್ಯರ ಪಟ್ಟಿ ಸಿದ್ಧಪಡಿಸಿ ಸಲ್ಲಿಸಲು ನಿರ್ಧರಿಸಲಾಯಿತು ಎಂದು ಹೇಳಲಾಗಿದೆ.

ಸಂಸದರು ಹೊರಕ್ಕೆ : ಕೋರ್‌ ಕಮಿಟಿಯಲ್ಲಿದ್ದ ಡಿ.ವಿ.ಸದಾನಂದಗೌಡ, ನಳಿನ್‌ ಕುಮಾರ್‌ ಕಟೀಲು, ಪ್ರಹ್ಲಾದ್‌ ಜೋಷಿ ಅವರು ತಾವು ಪ್ರತಿ  ನಿಧಿಸುವ ಕ್ಷೇತ್ರ ಕುರಿತ ಚರ್ಚೆ ವೇಳೆ ಸಭೆಯಿಂದ ಹೊರಗೆ ಉಳಿದಿದ್ದರು.

ಉಳಿದಂತೆ ಅನ್ಯ ಕ್ಷೇತ್ರಗಳ ಕುರಿತ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಮುರಳೀಧರರಾವ್‌, ಸಹ ಉಸ್ತುವಾರಿ ಕಿರಣ್‌ ಮಹೇಶ್ವರಿ, ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌. ಸಂತೋಷ್‌, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಪಿ.ಅರುಣ್‌ ಕುಮಾರ್‌ ಅವರು ನಿಯೋಗದಲ್ಲಿ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ.ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಾಧ್ಯಕ್ಷರು ಕೂಡ ಸಭೆಯಲ್ಲಿ ಪಾಲ್ಗೊಳ್ಳಬೇಕಿರುವುದರಿಂದ ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದಗೌಡ, ಜಗದೀಶ ಶೆಟ್ಟರ್‌, ಪ್ರಹ್ಲಾದ್‌ ಜೋಷಿ, ಕೆ.ಎಸ್‌.ಈಶ್ವರಪ್ಪ ಇತರರು ದೆಹಲಿಗೆ ತೆರಳಿದ್ದಾರೆ ಎಂದು ಗೊತ್ತಾಗಿದೆ. ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆದಿದೆ.

Advertisement

ಸುಮಲತಾ ಅಂಬರೀಶ್‌ ಅವರ ತೀರ್ಮಾನದ ಆಧಾರದ ಮೇಲೆ ಕೇಂದ್ರ ಚುನಾವಣಾ ಸಮಿತಿಯು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಮಾಜಿ ಸಚಿವ ಎ.ಮಂಜು ಅವರು ಪಕ್ಷದ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ನಿರಂತರ ಸಂಪರ್ಕದಲ್ಲಿದ್ದಾರೆ. ಮಂಜು ಅವರು ಪಕ್ಷ ಸೇರುವ ಆಶಯ ಹೊಂದಿದ್ದು, ಶೀಘ್ರವೇ ಪಕ್ಷ ಸೇರಲಿದ್ದಾರೆ ಎಂದು ಹೇಳಿದರು.

ನಾಳೆಯಿಂದ ನಾಮಪತ್ರ

ಬೆಂಗಳೂರು: ರಾಜ್ಯದ ದಕ್ಷಿಣ ಕರ್ನಾಟಕ ಭಾಗದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಮೊದಲ ಹಂತಕ್ಕೆ ಮಾ. 19ರಿಂದ (ಮಂಗಳವಾರ) ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಕೇಂದ್ರ ಚುನಾವಣಾ ಆಯೋಗದ ವೇಳಾ ಪಟ್ಟಿ ಯಂತೆ ಜಿಲ್ಲಾ ಚುನಾವಣಾಧಿಕಾರಿಗಳು ಅಧಿಸೂಚನೆ
ಹೊರಡಿಸಲಿದ್ದು, ಅದರಂತೆ ಚುನಾವಣಾ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಗಲಿದೆ.

ಅಧಿಸೂಚನೆ ಹೊರಡಿಸಿದ ಮಾ.19ರ ದಿನದಿಂದಲೇ ನಾಮಪತ್ರ ಸಲ್ಲಿಕೆ ಸಹ ಆರಂಭವಾಗಲಿದೆ. ನಾಮಪತ್ರ ಸಲ್ಲಿಸಲು ಮಾ.26 ಕೊನೆ ದಿನಾಂಕವಾಗಿದ್ದು, ಮಾ.27ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್‌ ಪಡೆದುಕೊಳ್ಳಲು ಮಾ.29 ಕೊನೆ ದಿನವಾಗಿದ್ದು, ಎಪ್ರಿಲ್‌ 18ರಂದು ಮತದಾನ ನಡೆಯಲಿದೆ. ಮೇ 23ಕ್ಕೆ ಮತ ಎಣಿಕೆ ನಡೆಯಲಿದ್ದು, ಮೇ 27ಕ್ಕೆ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಮೊದಲ ಹಂತದ ಕ್ಷೇತ್ರಗಳು: ಉಡುಪಿ-ಚಿಕ್ಕಮಗಳೂರು,ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳು ಕುರಿತಂತೆ ಸಮಗ್ರ ಚರ್ಚೆ ನಡೆಸಿ ಪಟ್ಟಿ ಸಿದಟಛಿಪಡಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಅಮಿತ್‌ ಶಾ ಅವರೊಂದಿಗೆ ಚರ್ಚೆ ಬಳಿಕ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಪರಿಶೀಲಿಸಿ ಅಂತಿಮಗೊಳಿಸಿ ಪ್ರಕಟಿಸಲಿದೆ.

● ಅರವಿಂದ ಲಿಂಬಾವಳಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ

ಎ. ಮಂಜು ಬಿಜೆಪಿಗೆ 

ಹಾಸನ: ಕಡೆಗೂ ಮಾಜಿ ಸಚಿವ ಎ.ಮಂಜು ಕಾಂಗ್ರೆಸ್‌ ತ್ಯಜಿಸಿ ಭಾನುವಾರ ಬಿಜೆಪಿ ಸೇರ್ಪಡೆಯಾದರು. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶಾಸಕ ಪ್ರೀತಂ ಗೌಡ ಬರಮಾಡಿಕೊಂ ಡರು. ಮೈತ್ರಿ ಅಭ್ಯರ್ಥಿ ಪ್ರಜ್ವಲ ಎದುರು ಬಿಜೆಪಿ ಅಭ್ಯ ರ್ಥಿ ಯಾಗಿ ಹಾಸನ ದಲ್ಲಿ ಕಣಕ್ಕಿಳಿಯಲಿದ್ದಾ ರೆ. ದೆಹಲಿ ಯಲ್ಲಿ ಸೋಮ ವಾರ ಬಿಜೆಪಿ ಅಭ್ಯರ್ಥಿಗಳ ಘೋಷಣೆ ಹಿನ್ನೆಲೆಯಲ್ಲಿ ತರಾ ತುರಿ ಯಲ್ಲಿ ಪಕ್ಷ ಸೇರ್ಪಡೆ ಯಾದರು. ರಾಜಕೀಯ ವನ್ನು ಬಿಜೆಪಿಯಿಂದಲೇ ಆರಂಭಿಸಿದ್ದ ಮಂಜು, ಮರಳಿ ಮಾತೃ ಪಕ್ಷಕ್ಕೆ ಬಂದಿದ್ದಾರೆ.

ಇಂದು ಏನೇನಾಗ್ತದೆ?

1.ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಸೇರಲಿದ್ದು, ರಾಜ್ಯದ 22 ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆ ಇದೆ.

2.ಬಹುತೇಕ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲಿರುವ ಸುಮಲತಾ ಸೋಮವಾರ ತನ್ನ ನಿಲುವನ್ನು ಬಹಿರಂಗಪಡಿಸಲಿದ್ದಾರೆ.

3.ಜೆಡಿಎಸ್‌ನಲ್ಲಿ ಐದು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕಾಂಗ್ರೆಸ್‌ ನಾಯಕರ ವಿಶ್ವಾಸಕ್ಕೆ ತೆಗೆದುಕೊಳ್ಳುವ
ನಿಮಿತ್ತ ಅವರೊಡನೆ ಸೋಮವಾರ ದೇವೇಗೌಡರು ಚರ್ಚಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next