Advertisement

ತೆಲಂಗಾಣದತ್ತ ಬಿಜೆಪಿ ನೋಟ

11:12 AM May 21, 2018 | Team Udayavani |

ಹೈದರಾಬಾದ್‌/ಚೆನ್ನೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಸರಕಾರ ರಚಿಸಲು ಸಾಧ್ಯವಾಗದೇ ಇದ್ದರೂ ದಕ್ಷಿಣ ಭಾರತದಲ್ಲಿ ಅದರ ಪ್ರಭಾವ ಮತ್ತು ಸಂಘಟನೆ ವಿಸ್ತರಿಸಲು ಮುಂದಾಗಿದೆ. 2019ರ ಲೋಕಸಭೆ ಚುನಾವಣೆ ಜತೆಗೆ ತೆಲಂಗಾಣ ವಿಧಾನಸಭೆ ಚುನಾವಣೆಯೂ ನಡೆಯಲಿದೆ. ಹೀಗಾಗಿ, ಪಕ್ಷದ ನಾಯಕರು ರಾಜ್ಯಕ್ಕೆ ಹೆಚ್ಚಿನ ಗಮನ ಹರಿಸಲಿದ್ದಾರೆ ಎಂದು ತೆಲಂಗಾಣ ಬಿಜೆಪಿ ಅಧ್ಯಕ್ಷ ಕೆ.ಲಕ್ಷ್ಮಣ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ತೆಲಂಗಾಣ ಸಹಿತ ದಕ್ಷಿಣದ ಎಲ್ಲಾ ರಾಜ್ಯಗಳಲ್ಲಿಯೂ ಪಕ್ಷವನ್ನು ಬಲಪಡಿಸುವ ಬಗ್ಗೆ ಹೆಚ್ಚಿನ ವಿಚಾರ ವಿನಿಮಯ ನಡೆದಿದೆ ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಲ ಮತ್ತು ಒಡಿಶಾದಲ್ಲಿನ ಮುಂದಿನ ವಿಧಾನಸಭೆ ಚುನಾವಣೆ ಮತ್ತು ಅದಕ್ಕಿಂತ ಮೊದಲೇ ಪಕ್ಷವನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸುವ ಬಗ್ಗೆ ಗುರಿ ಹಾಕಿಕೊಳ್ಳಲಾಗಿದೆ ಎಂದಿದ್ದಾರೆ ಲಕ್ಷ್ಮಣ. 

Advertisement

ಅದಕ್ಕೆ ಪೂರ್ವಭಾವಿಯಾಗಿ ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಮುಂದಿನ ತಿಂಗಳು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ಸಂಘಟನಾತ್ಮಕವಾಗಿ ಬಿಜೆಪಿ ರಾಜ್ಯದಲ್ಲಿ ಬಲವಾಗಿದೆ. ಬೂತ್‌ ಮಟ್ಟದಲ್ಲಿ ಪಕ್ಷವನ್ನು ಬಲವರ್ಧಿಸ
ಬೇಕಾದ ಕೆಲಸವಾಗಬೇಕಾಗಿದೆ. ಅದಕ್ಕಾಗಿ “ಪೇಜ್‌ ಪ್ರಮುಖ್‌’ರನ್ನು  ನೇಮಕ ಮಾಡಲಾಗುತ್ತದೆ. ಅವರ ನೇತೃತ್ವದಲ್ಲಿ ಪ್ರತಿ ಕುಟುಂಬವನ್ನೂ ಸಂಪರ್ಕಿಸಿ ಕೇಂದ್ರ ಸರಕಾರದ ಸಾಧನೆಗಳನ್ನು ವಿವರಿಸಲಾಗುತ್ತದೆ. ತೆಲಂಗಾಣ ರಾಷ್ಟ್ರ ಸಮಿತಿ ಸರಕಾರದ ವೈಫ‌ಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡಲಾಗುತ್ತದೆ ಎಂದು ಲಕ್ಷ್ಮಣ ವಿವರಿಸಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತೆಲಂಗಾಣಕ್ಕೆ ಹೆದ್ದಾರಿ, ರೈಲ್ವೆ ಯೋಜನೆಗಳು, ಉಜ್ವಲಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಅಡುಗೆ ಅನಿಲ ಸಂಪರ್ಕಗಳನ್ನು ನೀಡಿದೆ ಎಂದಿದ್ದಾರೆ. 

ಕರ್ನಾಟಕದಲ್ಲಿ ಬಿಜೆಪಿಗೆ 104 ಸ್ಥಾನಗಳು ಸಿಕ್ಕಿರುವುದು ಟಿಆರ್‌ಎಸ್‌ ಮತ್ತು ಟಿಡಿಪಿ ನಿದ್ದೆಗೆಡಿಸಿದೆ. ಹೈದರಾಬಾದ್‌ ಕರ್ನಾಟಕ ಪ್ರದೇಶದಲ್ಲಿ ತೆಲುಗು ಭಾಷಿಕರು ಬಿಜೆಪಿಯನ್ನೇ ಬೆಂಬಲಿಸಿದ್ದಾರೆ. ಹೀಗಾಗಿ ಈ ಪ್ರದೇಶದ 20ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಬಿಜೆಪಿಗೆ ಮತ ಹಾಕಬೇಡಿ ಎಂದು ಕರ್ನಾಟಕದಲ್ಲಿರುವ ತೆಲುಗು ಭಾಷಿಕರಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಈ ಬೆಳವಣಿಗೆ ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ ರಾವ್‌ ಮತ್ತು ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸವಾಲಾಗಿದೆ. ಇದೇ ವೇಳೆ ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಈಶಾನ್ಯ ರಾಜ್ಯಗಳ ಎನ್‌ಡಿಎ ನಾಯಕರ ಸಭೆಯಲ್ಲಿ ಭಾಗವಹಿಸಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿ ಶಾಸಕರನ್ನು ಖರೀದಿಸಲು ಮುಂದಾಗಿತ್ತು ಎಂಬ ಆರೋಪಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತನಿಖೆಗೆ ಆದೇಶ ನೀಡಬೇಕು. ಈ ಮೂಲಕ ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡು ತ್ತಿದ್ದಾರೆ ಎಂದು ಸಾಬೀತುಪಡಿಸಲಿ
– ಜೈವೀರ್‌ ಶೆರ್ಗಿಲ್‌, ಕಾಂಗ್ರೆಸ್‌ ವಕ್ತಾರ

Advertisement
Advertisement

Udayavani is now on Telegram. Click here to join our channel and stay updated with the latest news.

Next