Advertisement

ಪಶ್ಚಿಮಬಂಗಾಳ: ದೀದಿಗೆ ಕಾನೂನು ಅನ್ವಯವಾಗಲ್ಲವೇ? ಪೊಲೀಸ್ ಮತ್ತು ಬಿಜೆಪಿ ನಡುವೆ ಘರ್ಷಣೆ

02:23 PM Oct 08, 2020 | Nagendra Trasi |

ಕೋಲ್ಕತಾ:ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಚೇರಿಗೆ ಮುತ್ತಿಗೆ ಹಾಕಲು ತೆರಳುತ್ತಿದ್ದ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಅಶ್ರುವಾಯು ಪ್ರಯೋಗಿಸಿ ತಡೆಗಟ್ಟಿದ್ದು, ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿ ತಿಳಿಸಿದೆ.

Advertisement

ನಮ್ಮ ಜನರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಖಿದಿರ್ ಪುರ್ ಕಡೆಯಿಂದ ಕಲ್ಲುತೂರಾಟ ನಡೆಸಲಾಗಿದೆ. ಇದನ್ನು ಪೊಲೀಸರು ಗಮನಿಸಲಿಲ್ಲವೇ ಎಂದು ಬಿಜೆಪಿ ಮುಖಂಡ ಲೋಕೆಟ್ ಚಟರ್ಜಿ ಪ್ರಶ್ನಿಸಿದ್ದಾರೆ.

ಗುಂಪುಗೂಡುವುದನ್ನು ನಿಷೇಧಿಸಿದ ಬಂಗಾಳ ಸರ್ಕಾರದ ಆದೇಶ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿತ್ತು. ಬಿಜೆಪಿ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ ನಗರದಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ರಾಜಧಾನಿ ಕೋಲ್ಕತಾದಲ್ಲಿ ಪಕ್ಷದ ಬಲ ಪ್ರದರ್ಶನಕ್ಕೆ ಮುಂದಾಗಿರುವುದಾಗಿ ವರದಿ ತಿಳಿಸಿದೆ.

ಕೋವಿಡ್ 19 ಸೋಂಕಿನ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವುದು ಅಪಾಯಕಾರಿ ಮತ್ತು ಕಾನೂನು ಉಲ್ಲಂಘನೆಯಾಗುತ್ತದೆ ಎಂದು ಪಶ್ಚಿಮಬಂಗಾಳ ಬಿಜೆಪಿ ವರಿಷ್ಠ ಕೈಲಾಶ್ ವಿಜಯ್ ವರ್ಗೀಯ ತಿಳಿಸಿದ್ದಾರೆ. ಎಲ್ಲಾ ಕೆಲಸಗಾರರು ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸುತ್ತಾರೆ. ಈ ಕಾನೂನು ನಮಗೆ ಮಾತ್ರ ಅನ್ವಯವೇ? ಮಮತಾ ಬ್ಯಾನರ್ಜಿ ಸಾವಿರಾರು ಕಾರ್ಯಕರ್ತರ ಜತೆ ಪ್ರತಿಭಟನೆ ನಡೆಸುತ್ತಾರೆ. ಹೀಗಾಗಿ ನಾವು ಅವರಿಗೆ ಸಾಮಾಜಿಕ ಅಂತರದ ಬಗ್ಗೆ ತಿಳಿಸಿಕೊಡಬೇಕಾಗಿದೆ. ಈ ಕಾನೂನು ಅವರಿಗೂ ಅನ್ವಯವಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next