Advertisement
ಬುಧವಾರ ಮಧ್ಯಾಹ್ನ ಅಶೋಕ್ ದಿಲ್ಲಿಗೆ ತೆರಳಲಿದ್ದು, ಅವರ ಜತೆಗೆ ಮಾಜಿ ಡಿಸಿಎಂ ಡಾ| ಸಿ.ಎನ್. ಅಶ್ವತ್ಥ ನಾರಾಯಣ ಕೂಡ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನೊಂದು ಮೂಲಗಳ ಪ್ರಕಾರ ಚನ್ನಪಟ್ಟಣ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ತಮ್ಮ ಅಭಿಪ್ರಾಯ ತಿಳಿಸಲು ಅವರು ದಿಲ್ಲಿಗೆ ತೆರಳುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಅಶ್ವತ್ಥನಾರಾಯಣ ಕೂಡ ಜತೆಗೆ ಪ್ರಯಾಣಿಸುತ್ತಿದ್ದು, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರನ್ನು ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸುವಂತೆ ಅಶೋಕ್ ಹೈಕಮಾಂಡ್ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಡಾ| ಅಶ್ವತ್ಥ ನಾರಾಯಣ ಈ ಹಿಂದೆಯೇ ಯೋಗೇಶ್ವರ್‌ಗೆ ಚನ್ನಪಟ್ಟಣ ಟಿಕೆಟ್ ನೀಡುವಂತೆ ಪಕ್ಷಕ್ಕೆ ಶಿಫಾರಸು ಮಾಡಿದ್ದಾರೆಂದು ತಿಳಿದು ಬಂದಿದೆ.