Advertisement

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

12:53 AM Jul 05, 2024 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ತಾಕತ್ತಿದ್ದರೆ ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ, ಬಿಜೆಪಿ 140ರಿಂದ 150 ಸ್ಥಾನ ಗೆಲ್ಲುವುದು ಶತಃಸಿದ್ಧ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಸವಾಲು ಹಾಕಿದ್ದಾರೆ.

Advertisement

ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾ
ಗಿದ್ದಾರೆ. ರಾಜ್ಯದ 19 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಗೆದ್ದಿದೆ. ಸರಾಸರಿ 142 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ ಸಿಕ್ಕಿದೆ. ಈಗ ಚುನಾವಣೆ ನಡೆದರೂ ಬಿಜೆಪಿ 135-140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿಎಂ, ಡಿಸಿಎಂ, ಹಾಗೂ 17 ಸಚಿವರ ಸ್ವಕ್ಷೇತ್ರಗಳಲ್ಲೇ ಕಾಂಗ್ರೆಸ್‌ ಹಿನ್ನಡೆ ಅನುಭವಿಸಿದೆ. ಭ್ರಷ್ಟಾಚಾರದಲ್ಲಿ ತೊಡಗಿ, ಜನವಿರೋಧಿಯಾಗಿ ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಕಾಂಗ್ರೆಸ್‌ಗೆ ಇಲ್ಲ. ಹಣಬಲ, ತೋಳ್ಬಲ ಹತ್ತು ಆಮಿಷಗಳ ವಿರುದ್ಧ ರಾಜ್ಯದ ಜನರು ಮೋದಿಗೆ ಜನಮತ ನೀಡಿ¨ªಾರೆ. ಕೆಲವು ಕ್ಷೇತ್ರಗಳಲ್ಲಿ ನಮಗೆ ಸ್ವಲ್ಪ ಹಿನ್ನಡೆ ಆಗಿದೆ. ಆದರೆ ಕಾಂಗ್ರೆಸ್‌ನ ದುರಾಡಳಿತ ಕಾಂಗ್ರೆಸ್‌ ಭ್ರಷ್ಟಾಚಾರ ವಿರುದ್ಧ ಜನರು ಮತ ನೀಡಿದ್ದಾರೆ ಎಂದು ಅಭಿಪ್ರಾಯಪಟ್ಟರು.

ರಾಜ್ಯ ಸರಕಾರದ ತಪ್ಪು ನಿರ್ಧಾರ
ಗಳಿಂದ ದಿವಾಳಿಯಾಗಿದೆ. ಶಾಸಕರ ಅನುದಾನಕ್ಕೂ ಕತ್ತರಿ ಹಾಕಿದೆ. ಗ್ಯಾರಂಟಿಗಳ ಮೂಲಕ ಎಲ್ಲದಕ್ಕೂ ದರ ಹೆಚ್ಚಳ ಮಾಡಿದ್ದಾರೆ ಎಂದು ಟೀಕಿಸಿದರು.
ಸಿಎಂ ಕುಟುಂಬ ಭಾಗಿ
ಮುಡಾ ಅಕ್ರಮದಲ್ಲಿ ಸಿಎಂ ಕುಟುಂಬ ಶಾಮೀಲಾಗಿದೆ. ಇದರ ಬಗ್ಗೆ ನಾವು ನೀವು ಜನರಿಗೆ ಮನದಟ್ಟು ಮಾಡಬೇಕಿದೆ. ವಿಧಾನಸಭೆ ಅಧಿವೇಶನದಲ್ಲಿ ಇದರ ಬಗ್ಗೆ ಪ್ರಸ್ತಾವಿಸಿ ಎಂದು ಕರೆ ನೀಡಿದರು.

ರೇಣುಕಾಸ್ವಾಮಿ ಸೇರಿ ಹಲವರಿಗೆ ಸಂತಾಪ
ದರ್ಶನ್‌ ಗ್ಯಾಂಗ್‌ನಿಂದ ಹತ್ಯೆಗೊಳಗಾದ ರೇಣುಕಸ್ವಾಮಿ ಸೇರಿ ಹಲವರಿಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಂತಾಪ ಸೂಚಿಸಲಾಯಿತು.ಮಾಜಿ ಶಾಸಕ ವಸಂತ ಬಂಗೇರ, ವಿಧಾನ ಪರಿಷತ್‌ ಮಾಜಿ ಸದಸ್ಯ ಭಾನುಪ್ರಕಾಶ್‌, ಫ‌ಯಾಜ್‌ನಿಂದ ಹತ್ಯೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ, ಸಾಹಿತಿ ಕಮಲಾ ಹಂಪನಾ, ಸಾಹಿತಿ ಕೆ.ಟಿ. ಗಟ್ಟಿ ಮೊದಲಾದವರಿಗೆ ಸಂತಾಪ ಸಲ್ಲಿಸಲಾಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.