Advertisement

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

12:30 PM Jun 10, 2024 | Team Udayavani |

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿಗೆ ಕೇರಳದ ತ್ರಿಶ್ಶೂರ್‌ ನಲ್ಲಿ ನಟ ಸುರೇಶ್‌ ಗೋಪಿ ಗೆಲುವು ಸಾಧಿಸುವ ಮೂಲಕ ದೇವರ ನಾಡಿನಲ್ಲಿ ಭಾರತೀಯ ಜನತಾ ಪಕ್ಷ ಖಾತೆ ತೆರೆದಿತ್ತು. ಇದರೊಂದಿಗೆ ಸುರೇಶ್‌ ಗೋಪಿ ಭಾನುವಾರ ಮೋದಿ 3.0 ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗತ ವ್ಯಕ್ತಪಡಿಸುವ ಮೂಲಕ ಅಚ್ಚರಿ ಹುಟ್ಟಿಸಿದ್ದಾರೆ.

Advertisement

ಇದನ್ನೂ ಓದಿ:Belagavi; ಒಂದು ತಿಂಗಳ ಮಗುವನ್ನು ಒಂದೂವರೆ ಲಕ್ಷ ರೂ.ಗೆ ಮಾರಾಟ! ಐವರ ಬಂಧನ

ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮಾಧ್ಯಮದ ಜೊತೆ ಮಾತನಾಡಿದ ಸುರೇಶ್‌ ಗೋಪಿ, ನಾನು ಸಂಸದನಾಗಿ ಕಾರ್ಯನಿರ್ವಹಿಸಲು ಬಯಸುತ್ತೇನೆ ವಿನಃ, ಸಚಿವ ಸ್ಥಾನಮಾನ ಬೇಡ ಎಂಬುದಾಗಿ ತಿಳಿಸಿದ್ದಾರೆ.

ತಕ್ಷಣವೇ ನನ್ನ ರಾಜ್ಯ ಖಾತೆ ಸಚಿವ ಸ್ಥಾನಮಾನ ಹೊಣೆಗಾರಿಕೆಯಿಂದ ಬಿಡುಗಡೆಗೊಳಿಸುತ್ತಾರೆಂಬ ನಂಬಿಕೆ ಇರುವುದಾಗಿ ಸುರೇಶ್‌ ಗೋಪಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಸಚಿವ ಸ್ಥಾನ ಯಾಕೆ ಬೇಡ:

Advertisement

ತ್ರಿಶ್ಶೂರ್‌ ಜನತೆಗೆ ನನ್ನ ಬಗ್ಗೆ ಚೆನ್ನಾಗಿ ಗೊತ್ತಿದೆ. ಸಂಸದನಾಗಿ ನಾನು ಉತ್ತಮವಾಗಿ ಕೆಲಸ ಮಾಡುತ್ತೇನೆ ಎಂಬುದು ಜನತೆಗೆ ತಿಳಿದಿದೆ. ನನಗೆ ಸಿನಿಮಾದಲ್ಲಿ ನಟಿಸಬೇಕಾಗಿದೆ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಅದರ ಚಿತ್ರೀಕರಣದಲ್ಲಿ ಪಾಲ್ಗೊಳ್ಳಬೇಕಾಗಿದೆ. ಇನ್ನು ಈ ಬಗ್ಗೆ ಪಕ್ಷ ನಿರ್ಧರಿಸಲಿ ಎಂದು ಇಂಡಿಯನ್‌ ಎಕ್ಸ್‌ ಪ್ರೆಸ್‌ ಜತೆ ಮಾತನಾಡುತ್ತ ತಿಳಿಸಿದ್ದಾರೆ.

2024ರ ಲೋಕಸಭೆ ಚುನಾವಣ ಪ್ರಚಾರದ ಸಂದರ್ಭದಲ್ಲಿ ಸುರೇಶ್‌ ಗೋಪಿ ಅವರು, ಒಂದು ವೇಳೆ ನಾನು ಚುನಾವಣೆಯಲ್ಲಿ ಜಯ ಸಾಧಿಸಿದರೆ, ನಾನು ಕೇಂದ್ರ ಸಚಿವನಾಗುತ್ತೇನೆ. ಇದು ಮೋದಿ ಅವರ ಗ್ಯಾರಂಟಿಯಾಗಿದೆ ಎಂದು ಬಹಿರಂಗವಾಗಿ ಹೇಳಿದ್ದರು.

ಪ್ರಚಾರದಲ್ಲಿ ಸುರೇಶ್‌ ಗೋಪಿ ಅವರು “ತ್ರಿಶ್ಶೂರ್‌ ನ ಕೇಂದ್ರ ಸಚಿವ, ಇದು ಮೋದಿ ಗ್ಯಾರಂಟಿ” ಎಂಬ ಸ್ಲೋಗನ್‌ ಮೊಳಗಿಸಿದ್ದರು. ಇದೀಗ ಚುನಾವಣೆಯಲ್ಲಿ ಗೆದ್ದು, ಕೇಂದ್ರದ ರಾಜ್ಯ ಖಾತೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನಾನು ಸಿನಿಮಾ ಇಂಡಸ್ಟ್ರೀಯನ್ನು ಬಿಡಲಾರೆ, ನಟನೆ ನನ್ನ ಹವ್ಯಾಸವಾಗಿದೆ. ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಮಾತು ಕೊಟ್ಟಿದ್ದೇನೆ. ಹೀಗಾಗಿ ಸಚಿವ ಸ್ಥಾನ ಬೇಡ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next