Advertisement

ಬಿಜೆಪಿ ಕಾರ್ಯಕರ್ತರಿಂದ ಸಚಿವರಿಗೆ ಘೇರಾವ್‌

10:18 AM Feb 26, 2017 | |

ಬೆಂಗಳೂರು: ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಅವರ ಡೈರಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಕಪ್ಪಕೊಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಸಚಿವರು,ಶಾಸಕರಿಗೆ ಶನಿವಾರ ಘೇರಾವ್‌ ಹಾಕಿ ಪ್ರತಿಭಟಿಸಿದರು.

Advertisement

ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಪಂಗರಗಾ ಸೋನ್ಯಾಲಗಿರಿ ಜಗದ್ಗುರು ಪಂಚಾಕ್ಷರಿ ಪರ್ವತಲಿಂಗ ಪರಮೇಶ್ವರ ಮಹಾರಾಜರ 24ನೇ ಮಹಾಶಿವರಾತ್ರಿ ಜಾತ್ರಾ ಮಹೋಹತ್ಸವ ಸಮಾರಂಭಕ್ಕೆ ಆಗಮಿಸುತ್ತಿದ್ದ ರಾಜ್ಯ ಇಂಧನ ಸಚಿವ ಡಿ.ಕೆ. ಶಿವಕುಮಾರ ಅವರನ್ನು ತಾಲೂಕು ಬಿಜೆಪಿ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದ ಹತ್ತಿರ ತಡೆದು, ಘೋಷಣೆ ಕೂಗಿದರು.

ಡೈರಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ 3 ಕೋಟಿ ರೂ. ಕಪ್ಪು ಹಣ ನೀಡಿರುವ ಬಗ್ಗೆ ನಿಮ್ಮ ಹೆಸರು ದಾಖಲಾಗಿದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಅವರ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಇದಕ್ಕೆ ಪ್ರತ್ಯುತ್ತರಿಸಿದ ಡಿ.ಕೆ. ಶಿವಕುಮಾರ್‌, “ನಮ್ಮ ಹತ್ತಿರ ಸುಳ್ಳು ಆರೋಪ ನಡೆಯುವುದಿಲ್ಲ.ಅನಾವಶ್ಯಕವಾಗಿ ಪ್ರತಿಭಟನೆ ಮಾಡುವುದು ಹಾಗೂ ಘೋಷಣೆ ಕೂಗುವುದನ್ನು ಮಾಡಿದರೆ ಬಿಜೆಪಿ ನಾಯಕರು ಮಾಡುವ ಯಾವುದೇ ಕಾರ್ಯಕ್ರಮಗಳನ್ನು ನಡೆಸಲು ನಾವು ಬಿಡುವುದಿಲ್ಲ ‘ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಡಿವೈಎಸ್ಪಿ ಶರಣಪ್ಪ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಸಚಿವರು ಮುಂದೆ ಸಾಗಲು ಅನುವು ಮಾಡಿಕೊಟ್ಟರು. ವಾಹನ ಸಂಚಾರಕ್ಕೆ ತಡೆ: ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಮನೆ ಸಮೀಪ ಹಲಗೆ ಬಾರಿಸುವ ಮೂಲಕ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದರು.

Advertisement

ಪಕ್ಷದ ಜಿಲ್ಲಾ ಕಚೇರಿಯಿಂದ ಹಲಗೆ ಬಾರಿಸುತ್ತ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಸಚಿವರ ಮನೆಗೆ ಹೋಗುವ ತಿರುವಿನಲ್ಲೇ ಪೊಲೀಸರು ಬ್ಯಾರಿಕೇಡ್‌ ಹಾಕಿರುವುದನ್ನು ಕಂಡು ಪಿಬಿ ರಸ್ತೆಗೆ ಮರಳಿ, ಕೆಲ ಹೊತ್ತು ವಾಹನ ಸಂಚಾರಕ್ಕೆ ತಡೆಯೊಡ್ಡಿದರು. ಪೊಲೀಸರ ಕ್ರಮವನ್ನು ಖಂಡಿಸಿದರು.

ಮೈಸೂರಲ್ಲಿ ಸಿಎಂ ನಿವಾಸದೆದುರು ಧರಣಿ
ಮೈಸೂರಿನಲ್ಲೂ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟಿಸಿದರು. ರಾಮಕೃಷ್ಣನಗರದಲ್ಲಿರುವ ಸಿಎಂ ಸಿದ್ದರಾಮಯ್ಯ ನಿವಾಸದ ನ್ಯೂ ಕಾಂತರಾಜ ಅರಸ್‌ ರಸ್ತೆಯಲ್ಲೇ ಧರಣಿ ಕುಳಿತ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್‌ ಹೈಕಮಾಂಡ್‌ಗೆ ಕಪ್ಪನೀಡಿರುವ ರಾಜ್ಯ ಕಾಂಗ್ರೆಸ್‌ ನಾಯಕರ ವಿರುದ್ಧ ಧಿಕ್ಕಾರದ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಹೈಕಮಾಂಡ್‌ಗೆ ಕೋಟ್ಯಂತರ ರೂ. ಕಪ್ಪ ನೀಡಿರುವ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next