Advertisement

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

11:06 AM Apr 25, 2024 | Team Udayavani |

ಜೈಪುರ: ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಬಿಕನೇರ್ ಜಿಲ್ಲಾ ಅಧ್ಯಕ್ಷರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಉಸ್ಮಾನ್ ಘನಿ ಅವರೇ ಉಚ್ಛಾಟನೆಗೊಂಡ ನಾಯಕ.

Advertisement

ಘನಿ ಅವರು ಇತ್ತೀಚೆಗೆ ನವದೆಹಲಿಯಲ್ಲಿ ಸುದ್ದಿ ವಾಹಿನಿಯೊಂದರೊಂದಿಗೆ ಮಾತನಾಡುತ್ತಾ, ರಾಜಸ್ಥಾನದ 25 ಸ್ಥಾನಗಳಲ್ಲಿ ಬಿಜೆಪಿ ಮೂರು-ನಾಲ್ಕು ಸ್ಥಾನಗಳನ್ನು ಕಳೆದುಕೊಳ್ಳಲಿದೆ ಎಂದು ಹೇಳಿದ್ದರು.

ಅಲ್ಲದೆ ಇತ್ತೀಚಿನ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಕೂಡಾ ಉಸ್ಮಾನ್ ಘನಿ ಅವರು ಟೀಕೆ ಮಾಡಿದ್ದರು.

ಪ್ರಧಾನಿ ಅವರ ಮುಸ್ಲಿಮರ ವಿರುದ್ಧದ ಹೇಳಿಕೆಯ ಬಗ್ಗೆ ಕೇಳಿದಾಗ, “ಒಬ್ಬ ಮುಸ್ಲಿಮನಾಗಿ ನನಗೆ ಬೇಸರವಾಗಿದೆ’ ಎಂದು ಘನಿ ಹೇಳಿದರು.

ಅವರು ಬಿಜೆಪಿಗೆ ಮತ ಕೇಳಲು ಮುಸ್ಲಿಮರ ಬಳಿಗೆ ಹೋದಾಗ, ಸಮುದಾಯದ ಜನರು ಪ್ರಧಾನಿ ಮಾಡಿದ ಹೇಳಿಕೆಗಳ ಬಗ್ಗೆ ಮಾತನಾಡುತ್ತಾರೆ. ತಮ್ಮಿಂದ ಉತ್ತರವನ್ನು ಬಯಸುತ್ತಾರೆ ಎಂದು ಅವರು ಹೇಳಿದರು.

Advertisement

ರಾಜ್ಯದಲ್ಲಿ ಬಿಜೆಪಿ ವಿರುದ್ಧ ಜಾಟ್ ಸಮುದಾಯವು ಕೋಪಗೊಂಡಿದ್ದು, ಚುರು ಮತ್ತು ಇತರ ಕ್ಷೇತ್ರಗಳಲ್ಲಿ ಅವರು ಪಕ್ಷದ ವಿರುದ್ಧ ಮತ ಚಲಾಯಿಸಿದ್ದಾರೆ ಎಂದು ಅವರು ಹೇಳಿದರು.

ಈ ಹೇಳಿಕೆಗಳಿಗೆ ಪಕ್ಷವು ಯಾವುದೇ ಕ್ರಮ ಕೈಗೊಂಡರೆ ನಾನು ಹೆದರುವುದಿಲ್ಲ ಎಂದು ಘನಿ ಹೇಳಿದ್ದರು.

ಸುದ್ದಿ ವಾಹಿನಿ ವರದಿಗಾರರೊಂದಿಗೆ ಮಾತನಾಡಿದ ಉಸ್ಮಾನ್ ಘನಿ ಅವರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಓಂಕಾರ್ ಸಿಂಗ್ ಲಖಾವತ್ ಅವರು ಮಾಧ್ಯಮಗಳಲ್ಲಿ ಪಕ್ಷದ ಇಮೇಜ್ ಗೆ ಕಳಂಕ ತರಲು ಉಸ್ಮಾನ್ ಘನಿ ಪ್ರಯತ್ನಿಸಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next