Advertisement
ಸೋಮವಾರದಂದು ಮೂಡಲಗಿ ಪಟ್ಟಣದ ತಹಶೀಲ್ದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.
Related Articles
Advertisement
ಕಳೆದ 2 ತಿಂಗಳಿನಿಂದ ಅರಭಾವಿ ಕ್ಷೇತ್ರದಲ್ಲಿ ಎಲ್ಲ ಸಮಾಜಗಳನ್ನು ಒಟ್ಟುಗೂಡಿಸಿದ್ದೇವೆ. ಎಲ್ಲ ಸಮಾವೇಶಗಳು ಭರ್ಜರಿಯಾಗಿ ಯಶಸ್ವಿ ಮಾಡಿದ್ದಾರೆ. ಇದರಿಂದ ವಿರೋಧಿಗಳಿಗೆ ನಡುಕ ಪ್ರಾರಂಭವಾಗಿದೆ. ಯಾವ ಸಮಾಜದವರನ್ನು ಹಿಡಿಯಬೇಕೆಂಬ ಗೊಂದಲದಲ್ಲಿ ಇದ್ದಾರೆ. ಈಗ ಮುಸ್ಲಿಂ ಸಮಾಜದವರು ಒಂದಾಗಿ ಬಿಜೆಪಿಗೆ ಬೆಂಬಲ ನೀಡಿದ್ದರಿಂದ ಅವರ ಆಸೆಗೆ ತನ್ನೀರು ಎರಚಿದಂತಾಗಿದೆ. ವಿರೋಧಿಗಳ ಲೆಕ್ಕಾಚಾರ ಕ್ಷೇತ್ರದಲ್ಲಿ ಉಲ್ಟಾ ಆಗಿದೆ ಎಂದು ತಿಳಿಸಿದರು.
ಕ್ಷೇತ್ರದಲ್ಲಿ ಮುಸ್ಲಿಂ ಸಮಾಜದವರ ಆಶೋತ್ತರಗಳಿಗೆ ಸ್ಪಂದಿಸಲಾಗಿದೆ.ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಕೆಲಸವನ್ನು ಪೂರ್ಣಗೊಳಿಸಲಾಗುವುದು. ಬರುವ ಚುನಾವಣೆಯಲ್ಲಿ ಎಲ್ಲರೂ ರಾಜ್ಯದಲ್ಲಿ ಬಿಜೆಪಿ ಮತ್ತೇ ಅಧಿಕಾರಕ್ಕೆ ಬರುವಂತೆ ಪ್ರಾರ್ಥನೆ ಮಾಡಿಕೊಳ್ಳಿ, ನಮ್ಮ ಪಕ್ಷ ಅಧಿಕಾರಕ್ಕೆ ಮತ್ತೋಮ್ಮೆ ಬಂದರೇ ಅಭಿವೃದ್ದಿ ಕಾರ್ಯಗಳಿಗೆ ಮತ್ತಷ್ಟು ಅನುಕೂಲವಾಗಲಿದೆ ಎಂದರು.
ಮುಖಂಡ ಲಾಲಸಾಬ ಸಿದ್ದಾಪೂರ ಮಾತನಾಡಿ, ಮುಸ್ಲಿಂ ಸಮುದಾಯ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆನ್ನಿಗೆ ಯಾವಾಗಲೂ ಇದೆ. ನಮ್ಮ ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಿದ್ದಾರೆ. ಅವರ ಬಳಿ ಯಾರೇ ಯಾವ ಸಮಸ್ಯೆಗಳನ್ನು ಹೊತ್ತುಕೊಂಡು ಹೋದಲ್ಲಿ ತಕ್ಷಣವೇ ಪರಿಹಾರ ಸೂಚಿಸುತ್ತಾರೆ. ಖಾಲಿ ಕೈಯಿಂದ ಕಳಿಸಿದ ಉದಾಹರಣೆಯೇ ಇಲ್ಲ. ನಮ್ಮ ಸಮುದಾಯಕ್ಕೆ ಸಾಕಷ್ಟು ಉಪಕಾರ ಮಾಡಿರುವ ಶಾಸಕರ ಋಣವನ್ನು ನಾವೆಲ್ಲರೂ ಅವರಿಗೆ ನಮ್ಮ ಅಮೂಲ್ಯವಾದ ಮತವನ್ನು ನೀಡುವ ಮೂಲಕ ಪ್ರಚಂಡ ಬಹುಮತದಿಂದ ಆಯ್ಕೆ ಮಾಡೋಣವೆಂದರು.
ಅಧ್ಯಕ್ಷತೆಯನ್ನು ಹಿರಿಯ ಮುಖಂಡ ಜನಾಬ್ ಎಚ್.ಡಿ.ಮುಲ್ಲಾ ವಹಿಸಿದ್ದರು. ವೇದಿಕೆಯಲ್ಲಿ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ, ಮುಸ್ಲಿಂ ಸಮಾಜದ ಮುಖಂಡರಾದ ಅಜೀಜ್ ಡಾಂಗೆ, ಮಲ್ಲಿಕ ಹುಣಶ್ಯಾಳ, ಅನ್ವರ ನದಾಫ, ಹುಸೇನಸಾಬ ಶೇಖ, ಅಬ್ದುಲ್‌ಗಫಾರ ಡಾಂಗೆ, ನನ್ನುಸಾಬ ಶೇಖ, ರಾಜೇಸಾಬ ಖೆಮಲಾಪೂರ, ಅಮೀನಸಾಬ ಯಳ್ಳೂರ, ಹಾಸಿಮ್ ನಗಾರ್ಚಿ, ದಸ್ತಗೀರಸಾಬ ಶಿರಹಟ್ಟಿ, ನಿಜಾಮಸಾಬ ಜಮಾದಾರ, ರಿಯಾಜ ಯಾದವಾಡ, ಇಕ್ಬಾಲ್ ಸರ್ಕಾವಸ್, ರಸೂಲ ಮಿರ್ಜಾನಾಯಿಕ, ರಾಜು ಬಳಿಗಾರ, ಹಾಜೀಸಾಬ ನದಾಫ, ಬಂದೇನವಾಜ ನದಾಫ, ಶಾನೂರ ಮೊಘಲ, ಇಮಾಮ ಮೋಮಿನ, ಇಸ್ಮಾಯಿಲ್ ಲಾಡಖಾನ, ಎಮ್.ಎಸ್.ದಂತಾಳೆ, ಮಕ್ತುಮಸಾಬ ಖಾಜಿ, ಸೇರಿದಂತೆ ಅರಭಾವಿ ಕ್ಷೇತ್ರದ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಮುಸ್ಲಿಂ ಸಮಾಜ ಬಾಂಧವರು ಅದ್ದೂರಿಯಾಗಿ ಸನ್ಮಾನಿಸಿದರು. ಜಾನಪದ ಗಾಯಕ ಶಬ್ಬೀರ ಡಾಂಗೆ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಕುರಿತು ಹಾಡಿರುವ ಹಾಡಿಗೆ ಸಭಿಕರು ಕುಣಿದು ಕುಪ್ಪಳಿಸಿದರು. ಹಾಪೀಜ್‌ಉಮರ ಶೇಖ ಖುರಾನ್ ಪಠಣ ಭೋದಿಸಿದರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಪಟ್ಟಣದ ಬಸವೇಶ್ವರ ವೃತ್ತದಿಂದ ಬೃಹತ ಮೆರವಣಿಗೆ ಮೂಲಕ ಮುಖ್ಯವೇದಿಕೆಗೆ ಬರಮಾಡಿಕೊಳ್ಳಲಾಯಿತು.ಶರೀಫ ನದಾಫ ಸ್ವಾಗತಿಸಿದರು.