Advertisement

MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ

09:30 PM Dec 27, 2024 | Team Udayavani |

ಕಲಬುರಗಿ: ನನ್ನ ಹತ್ಯೆಗೆ ಸೊಲ್ಲಾಪುರದ ಇಬ್ಬರು ರೌಡಿಗಳಿಗೆ ಸುಪಾರಿ ಕೊಟ್ಟಿದ್ದಾರೆ ಎಂದು ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮಡು ಆರೋಪಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಬೀದರ್‌ನ ಗುತ್ತಿಗೆದಾರನ ಆತ್ಮಹತ್ಯೆಗೂ ಮುನ್ನ ಬರೆದಿಟ್ಟ 8 ಪುಟಗಳ ಡೆತ್‌ನೋಟ್‌ನಲ್ಲಿ ಉಲ್ಲೇಖವಾಗಿದೆ. ನಮ್ಮ ಹತ್ಯೆಗೆ ಸೊಲ್ಲಾಪುರದ ಇಬ್ಬರು ರೌಡಿಗಳಿಗೆ ಸುಪಾರಿ ಕೊಟ್ಟಿದ್ದಾರೆಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ. ಇದರ ಬಗ್ಗೆ ಸಿಬಿಐ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಬೇಕು. ನಾವೇನು ಹೆದರಿ ಸುಮ್ಮನೆ ಕೂಡುವರರಲ್ಲ. ಜನರ ಸೇವೆ ಮುಂದುವರಿಸುತ್ತೇವೆ. ಗೃಹ ಮಂತ್ರಿಗಳಿಗೆ, ರಾಜ್ಯಪಾಲರಿಗೆ ದೂರು ಕೊಡುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next